ಹಳೇ ಹುಬ್ಬಳ್ಳಿ ಗಲಾಟೆ ಹಿಂಪಡೆಯುತ್ತಿರುವ ರಾಜ್ಯ ಸರ್ಕಾರ ನಿರ್ಧಾರ ಖಂಡಿಸಿ ವಿರೋಧ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ರಸ್ತೆಗೀಳಿದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದ ಮೂಲಕ ಸವದತ್ತಿಗೆ ತೆರಳಲಿದ್ದು, ಈ ನಿಟ್ಟಿನಲ್ಲಿ ಸಿಎಂ ಸಾಗುವ ಮಾರ್ಗವಾದ ನಗರದ ಗೋಕುಲ್ ರಸ್ತೆಯ ಅಕ್ಷಯ ಪಾರ್ಕ ಬಳಿ ರಸ್ತೆ ತಡೆದು ಬಿಜೆಪಿಗರು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಗೆ ಧಿಕ್ಕಾರ ಎಂದು ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪ್ರತಿಭಟನಾ ಕಾವು ಹೆಚ್ಚಾಗುತ್ತಿದ್ದಂತೆಯೇ ಪ್ರತಿಭಟನಾ ನಿರತರ ಮನವೊಲಿಸಲು ಹು-ಧಾ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರು ಯತ್ನಿಸಿದರೂ ಕೂಡಾ ಪ್ರತಿಭಟನಾಕಾರರು ಮನವಿಗೆ ಜಗ್ಗದ ಹಿನ್ನಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣಾ ಮಜ್ಜಗಿ ಸೇರಿದಂತೆ ಇನ್ನಿತರರು ಇದ್ದರು.