ಸವದತ್ತಿ ತಾಲೂಕಿನ ನವೀಲುತೀರ್ಥದಲ್ಲಿ ಕರ್ನಾಟಕ ನೀರಾವರಿ ನಿಗಮದ ನವೀಕೃತ ಪ್ರವಾಸಿ ಮಂದಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿದರು.
ಈ ವೇಳೆ ಶಾಸಕರಾವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ, ಬಿ.ಬಿ.ಚಿಮ್ಮನಕಟ್ಟಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಸದಾಶಿವಗೌಡ ಪಾಟೀಲ, ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎ.ಎಲ್.ವಾಸನದ, ಅಧೀಕ್ಷಕ ಇಂಜಿನಿಯರ್ ಮಧುಕರ್ ಮೊದಲಾದವರು ಉಪಸ್ಥಿತರಿದ್ದರು.