Chikkodi

ಕೃಷ್ಣಾ,ಉಪನದಿಗಳಲ್ಲಿ ನೀರಿನ ಹರಿವು ಹೆಚ್ಚಳ

Share

ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ಹಾಗೂ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಕೃಷ್ಣಾ ಹಾಗೂ ಉಪನದಿಗಳಲ್ಲಿ ನೀರಿನ ಹರಿವು ಪ್ರಮಾಣ ಹೆಚ್ಚಳವಾಗಿದೆ.

ಅಲ್ಲದೇ ಮಳೆ ನೀರಿನಿಂದ ಸೋಯಾಬಿನ್, ಹತ್ತಿ, ಶೇಂಗಾ, ಗೋವಿನ ಜೋಳ, ಈರುಳ್ಳಿ, ತರಕಾರಿ ಸೇರಿದಂತೆ ವಿವಿಧ ಬೆಳೆಯು ಜಲಾವೃತಗೊಂಡಿವೆ. ಹೀಗಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಪರಿಸ್ಥಿತಿಯು ಅನ್ನದಾತನದ್ದಾಗಿದೆ.

ಕಳೆದ 2-3 ದಿನಗಳಿಂದ ಮಳೆ ಬೀಳುತ್ತಿರುವ ಪರಿಣಾಮವಾಗಿ ಕೃಷ್ಣಾ ದೂಧಗಂಗಾ, ವೇದಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹೀಗಾಗಿ ನಿಪ್ಪಾಣಿ ತಾಲ್ಲೂಕಿನ ದೂಧಗಂಗಾ ನದಿಯ ಬಾರವಾಡ-ಕುನ್ನೂರು ಕಿರು ಸೇತುವೆಯು ಜಲಾವೃತಗೊಂಡು ಸಂಚಾರ ಸ್ಥಗಿತವಾಗಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಇಂತಹ ಸ್ಥಳಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜನೆ ಮಾಡಿದೆ.

Tags:

error: Content is protected !!