Uncategorized

ಹೋರಾಟಗಾರರ ಮೇಲೆ ಲಾಠಿ ಪ್ರಹಾರ: ವಿಜಯಪುರ ಜಿಲ್ಲೆಯಲ್ಲಿ ವ್ಯಾಪಕ ಖಂಡನೆ

Share

ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆದಿದೆ. ಲಾಠಿ ಚಾರ್ಜ್ ಸದ್ಯ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಿದೆ. ಇತ್ತ ಲಾಠಿ ಚಾರ್ಜ್ ಖಂಡಿಸಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇತ್ತ ಹೋರಾಟದ ರೂವಾರಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಸ್ವಕ್ಷೇತ್ರದಲ್ಲಿಯೂ ತೀವ್ರ ಖಂಡನೆ ವ್ಯಕ್ತವಾಗಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.

ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಮಂಗಳವಾರ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪಂಚಮಸಾಲಿ ಸಮುದಾಯ ಮುಂದಾಗಿತ್ತು. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಮ್ಮ ಮೇಲೆಯೇ ಕಲ್ಲುತೂರಿದ್ದಕ್ಕೆ ಸಿಟ್ಟಾದ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದ್ದಾರೆ.

ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾ ನಿರತರು ದಿಕ್ಕಾಪಾಲಾಗಿ ಓಡಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಮುದ್ದೇಬಿಹಾಳ ಮಾಜಿ ಶಾಸಕ ಎ‌.ಎಸ್.ಪಾಟೀಲ ನಡಹಳ್ಳಿ ಶಾಂತಿಯುತವಾಗಿ ಮೀಸಲಾತಿ ಹೋರಾಟ ನಡೆಸುತ್ತಿದ್ದ ರಾಣಿ ಚೆನ್ನಮ್ಮರ ವಂಶಸ್ಥರಾದ ಪಂಚಮಸಾಲಿ ಲಿಂಗಾಯತ ಸಮುದಾಯದವರ ಮೇಲೆ ಕಾಂಗ್ರೆಸ್ ಸರ್ಕಾರ ನಡೆಸಿದ ಅಮಾನುಷ ಲಾಠಿಚಾರ್ಜ್‌ ಅತ್ಯಂತ ಖಂಡನೀಯ. ಪೊಲೀಸ್‌ ಸ್ಟೇಶನ್‌ ಗೆ ಬೆಂಕಿ ಹಚ್ಚುವವರಿಗೆ, ಹೊಟೇಲ್‌ಗಳಲ್ಲಿ ಬಾಂಬ್‌ ಬ್ಲಾಸ್ಟ್‌ ಮಾಡುವವರಿಗೆ ಅಮಾಯಕ ಪಟ್ಟ ಕಟ್ಟುವ ಕಾಂಗ್ರೆಸ್ಸಿಗರು ಪ್ರತಿಭಟನಾನಿರತ ಪಂಚಮಸಾಲಿ ಸಮುದಾಯದವರ ಮೇಲೆ ಪೊಲೀಸರ ಮೂಲಕ ಹಲ್ಲೆ ನಡೆಸಿರುವುದು ಅಖಂಡ ಪಂಚಮಸಾಲಿ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನೂ ಮಾಜಿ ಸಚಿವ ಮುರುಗೇಶ ನಿರಾಣಿ ಕೂಡಾ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರ ಹೋರಾಟಗಾರರ ಮನವೊಲಿಸುವ ಬದಲು ಲಾಠಿ ಚಾರ್ಜ್ ‌ಮಾಡಿ ಹಿಟ್ಲರ್ ಧೋರಣೆ ಅನುಸರಿಸಿದೆ.ಅಮಾಯಕ ಹೋರಾಟಗಾರರ ಕೈ ಮುರಿದಿವೆ ತಲೆ ಒಡೆದು ಗಂಭೀರ ಗಾಯಗಳಾಗಿವೆ.ನಮ್ಮ ಬಿಜೆಪಿ ಸರಕಾರ ಇದ್ದಾಗ ಹೋರಾಟಗಾರರ ಮೇಲೆ ಎಂದೂ ಬಲಪ್ರಯೋಗ ‌ಮಾಡಿಲ್ಲ.ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಮಾಯಕ ಹೋರಾಟಗಾರರ ಮೇಲೆ ದಬ್ಬಾಳಿಕೆ ಮಾಡಿದೆ.ಪಂಚಮಸಾಲಿ ಸಮಾಜದ ಜನ ಮುಂದೆ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಟ್ನಲ್ಲಿ ವಿಜಯಪುರ ಜಿಲ್ಲೆಯಲ್ಲಿ ಲಾಠಿ ಪ್ರಹಾರ ಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅಲ್ಲದೇ ಸರ್ಕಾರ ಲಾಠಿ ಪ್ರಹಾರ ಮಾಡುವ ಮೂಲಕ ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ.

Tags:

error: Content is protected !!