ಅಥಣಿ:ಬೆಳಗಾವಿಯ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ 2ಎ ಮೀಸಲಾತಿ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಪಂಚಮಸಾಲಿಗರ ಮೇಲೆ ಲಾಠಿಚಾರ್ಜ್ ಮಾಡಿರುವುದನ್ನು ಖಂಡಿಸಿ ಅಥಣಿ ಪಟ್ಟಣದಲ್ಲಿ ಪಂಚಮಸಾಲಿಯ ಸಮುದಾಯದವರು ರಾಷ್ಟ್ರೀಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಶಿವಯೋಗಿ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಪಂಚಮಸಾಲಿಗರು ಮಾನವ ಸರಪಳಿ ನಿರ್ಮಿಸುವ ಮೂಲಕ ರಾಜ್ಯಾ ಸರ್ಕಾರದ ಗುಂಡಾ ವರ್ತನೆಗೆ ಆಕ್ಷೆಪ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ಸರ್ಕಾರ ಪ್ರತಿಭಟನಾಕಾರರ ಮೇಲೆ ಪೊಲೀಸ್ ರಿಂದ ಲಾಠಿ ಚಾರ್ಜ್ ಮಾಡುವ ಮೂಲಕ ಮಾನವ ಹಕ್ಕು ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಲಿಂಗಾಯತ ಸಮಾಜದ ಬಾಂಧವರ ಮೇಲೆ ದಬ್ಬಾಳಿಕೆ ಹಾಗೂ ಲಾಠಿಚಾರ್ಜ್ ಮಾಡಿರುವುದು ನಿಜಕ್ಕೂ ಸರ್ಕಾರಕ್ಕೆ ಶೋಭಿತವಲ್ಲ ಕೂಡಲೇ ಸರ್ಕಾರ ಸಮಾಜದ ಬಾಂಧವರ ಮೇಲೆ ಹಾಕಿರುವಂತಹ ಕೇಸುಗಳನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ರಾಜ್ಯ ಸರ್ಕಾರ ವಿರುದ್ಧ ಮುಂದಿನ ದಿನಮಾನಗಳಲ್ಲಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಕೆಯನ್ನು ನೀಡಲಾಯಿತು.