ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ ಕಿರುಕುಳಕ್ಕೆ ನಡೆಯುತ್ತಿರುವ ಆತ್ಮಹತ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕಠಿಣ ಕಾನೂನು ಜಾರಿಗೆ ತಂದರೂ ಕೂಡ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಬೆಳಗಾವಿಯಲ್ಲಿ ಮತ್ತೋರ್ವ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ ಕಿರುಕುಳಕ್ಕೆ ನಡೆಯುತ್ತಿರುವ ಆತ್ಮಹತ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕಠಿಣ ಕಾನೂನು ಜಾರಿಗೆ ತಂದರೂ ಕೂಡ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ರಫೀಕ್ ತಿಗಡಿ (38) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಕ್ರೋ ಫೈನಾನ್ಸನಿಂದ ಈತ 6 ಲಕ್ಷ ಸಾಲ ಮಾಡಿದ್ದ. ಸಾಲ ವಸೂಲಾತಿಗಾಗಿ ಮನೆಗೆ ಬಂದ ಫೈನಾನ್ಸ್ ಸಿಬ್ಬಂದಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಬೈಲಹೊಂಗಲ ಠಾಣೆಯನ್ನು ಪ್ರಕರಣ ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ