Dharwad

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್….ಧಾರವಾಡ ಹೈಕೋರ್ಟನಿಂದ ನಿರೀಕ್ಷಣಾ ಜಾಮೀನು ಮಂಜೂರು…

Share

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಧಾರವಾಡ ಹೈಕೋರ್ಟ್ ‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಇನ್ನು ಈ ಕುರಿತು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಉಚ್ಛ ನ್ಯಾಯಾಲಯವು ಮಾಜಿ ಸಿಎಂ ಯಡಿಯೂರಪ್ಪನವರ ಮೇಲಿನ ಪೋಕ್ಸೋ ಪ್ರಕರಣದ ಅರ್ಜಿಯನ್ನು ವಜಾಗೊಳಿಸಿ, ಮರುಪರಿಶೀಲನೆಗೆ ಆದೇಶಿಸಿದೆ ಎಂದಿದ್ದಾರೆ.

Tags:

error: Content is protected !!