Belagavi

8ನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ

Share

ಕಳೆದ 8 ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಕೈಗೊಂಡ ಮುಷ್ಕರಕ್ಕೆ ಇಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘಟನೆಯೂ ಬೆಂಬಲವನ್ನು ಸೂಚಿಸಿದೆ.

ಕಳೆದ 8 ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಬೆಳಗಾವಿಯ ತಹಶೀಲ್ದಾರ ಕಾರ್ಯಾಲಯದ ಎದುರು ಗ್ರಾಮ ಆಡಳಿತ ಅಧಿಕಾರಿಗಳು ಕೈಗೊಂಡ ಮುಷ್ಕರ ಇಂದು 8ನೇ ದಿನಕ್ಕೆ ಕಾಲಿಟ್ಟಿದೆ. ಆದರೇ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ. ಇಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘಟನೆಯೂ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಬೆಂಬಲವನ್ನು ಸೂಚಿಸಿದೆ.

ಈ ವೇಳೆ ಮಾತನಾಡಿದ ಅಖಂಡ ಕರ್ನಾಟಕ ರಾಜ್ಯ ರೈತ ಸಂಘಟನೆಯ ತಾಲೂಕಾಧ್ಯಕ್ಷರಾದ ಬಸವರಾಜ್ ಡೊಂಗರಗಾಂವ ಅವರು ಗ್ರಾಮ ಆಡಳಿತ ಅಧಿಕಾರಿಗಳು ರೈತರ ಬಲಗೈಯಾಗಿ ಕೆಲಸ ಮಾಡುತ್ತಾರೆ. ಆದರೇ ಗ್ರಾಮ ಮಟ್ಟದಲ್ಲಿ ಸೇವೆ ಸಲ್ಲಿಸುವ ಅವರಿಗೆ ಕಾರ್ಯಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳು ಸಿಗದಾಗಿವೆ. ಅಲ್ಲದೇ ಅವರ ವರ್ಗಾವಣೆಯನ್ನು ವೈಜ್ಞಾನಿಕವಾಗಿ ಮಾಡಲು ಸರ್ಕಾರ ಚಿಂತನೆ ನಡೆಸಬೇಕು. ಕಂದಾಯ ಸಚಿವರು ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳ ಮತ್ತು ಬೇಡಿಕೆಗಳ ಕುರಿತು ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಅಖಂಡ ಕರ್ನಾಟಕ ರಾಜ್ಯ ರೈತ ಸಂಘಟನೆಯ ಸದಸ್ಯರು ಭಾಗಿಯಾಗಿದ್ಧರು.

Tags:

error: Content is protected !!