ಅಥಣಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ರೈತರ ಜಮೀನಿಗೆ ಬೆಂಕಿ ತಗುಲಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಜೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.

ನಿನ್ನೆ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಬೆಂಕಿ ಕಿಡಿ ಆವರಿಸಿ ರೈತರ ಜಮೀನುಗಳಿಗೆ ನುಗ್ಗಿದೆ. ಸುಮಾರು ವರ್ಷಗಳ ಹಿಂದೆ ಅಳವಡಿಸಲಾದ ಹಳೆಯ ವಿದ್ಯುತ್ ಕಂಬದ ತಂತಿ ಜೋತು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆಗೆ ಸುತ್ತಮುತ್ತಲಿನ ಗಿಡ-ಗಂಟಿ ಗಳು ಸುಟ್ಟಿದ್ದು ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಸೇವಾ ಸಂಘದ ಸದಸ್ಯರು ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವೀಯಾಗಿದ್ದಾರೆ.