ಬಜೆಟ್’ನಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಣ ಮೀಸಲಿಡದ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ, ಅನುದಾನವನ್ನ ನೀಡಲೇಬೇಕೆಂದು ಒತ್ತಾಯಿಸಿ ಮಾರ್ಚ್ 18 ರಂದು ಕಿತ್ತೂರು ಬಂದ್’ಗೆ ಕರೆ ನೀಡಲಾಗಿದೆ ಎಂದು ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು.

ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಬಜೆಟಿನಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಯಾವುದೇ ರೀತಿಯ ಅನುದಾನವನ್ನು ಮೀಸಲಿಟ್ಟಿಲ್ಲ. ಕಿತ್ತೂರನ್ನು ಪ್ರವಾಸಿ ಕ್ಷೇತ್ರವನ್ನಾಗಿಸಲು ಅನುದಾನವನ್ನು ನೀಡಲೇಬೇಕೆಂದು ಮಾರ್ಚ್ 18 ರಂದು ಕಿತ್ತೂರು ಬಂದಿಗೆ ಕರೆಯನ್ನು ನೀಡಲಾಗಿದೆ. ಈ ವರ್ಷ ಅನುದಾನವನ್ನ ನೀಡಲೇಬೇಕು. ಈ ಬಂದ್’ಗೆ ಎಲ್ಲರೂ ಸಹಕರಿಸಬೇಕೆಂದು ಕರೆ ನೀಡಿದರು.