ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ ಸಿ -ಎಸ್‌ಟಿಗಳ ಅನುದಾನವನ್ನು ಬೇರೆ ಇಲಾಖೆಗೆ ಬಳಸಿಕೊಂಡು ಅವರಿಗೆ ಘೋರ ಅನ್ಯಾಯ ಮಾಡಿದೆ ಎಂದು ಎಂ ಎಲ್ ಸಿ ಎಂ ರವಿಕುಮಾರ್ ಕಿಡಿಕಾರಿದರು

ಬೆಳಗಾವಿಯಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರಗೋಸ್ಕರವೇ ಬಜೆಟ್ ಮಂಡಿಸಲಾಗಿದೆ. ಎಸ್ ಸಿ, ಎಸ್ ಟಿ ಗಳಿಗಾಗಿ ಮೀಸಲಿಟ್ಟಿದ್ದ ಸುಮಾರು 42,000 ಕೋಟಿ ರೂಪಾಯಿ ಹಣದಲ್ಲಿ ಎಸ್‌ಸಿ,ಎಸ್ಟಿ ಗಳಿಗೆ ಕೇವಲ ರೂ.7000 ಕೋಟಿ ಹಣ ಮಾತ್ರ ತಲಪುತ್ತದೆ. ಉಳಿದ ಹಣವನ್ನು ಬೇರೆ ಇಲಾಖೆಗಳಿಗೆ ಹಂಚಿದ್ದಾರೆ.
ಹೀಗಾಗಿ ಈ ಸರ್ಕಾರದಿಂದ ಎಸ್ಸಿ ಎಸ್ಟಿ ಗಳಿಗೆ ಘೋರ ಅನ್ಯಾಯವಾಗುತ್ತಿದೆ ಎಂಬುದನ್ನು ಆ ಸಮಾಜದ ಬಾಂಧವರು ಅರ್ಥ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಅಭಿವೃದ್ಧಿ ಎನ್ನುವುದು ಸಂಪೂರ್ಣವಾಗಿ ಸ್ಥಗಿತಗೊಂಡಿದೆ ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗದೇ ಇದ್ದಿದ್ದಕ್ಕೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕರೇ ಬೇಸರಗೊಂಡಿದ್ದಾರೆ ಎಂದು ಅವರು ಸರ್ಕಾರದ ನಡೆಯನ್ನು ಟೀಕಿಸಿದರು