Banglore

ಯುವಾ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಎಸ್.ಮಂಜುನಾಥ್ ಗೌಡ ಅವರು ಪದಗ್ರಹಣ…ನೂತನ ಸದಸ್ಯರ ಪ್ರಮಾಣವಚನ…

Share

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿಯ ನೂತನ ಅಧ್ಯಕ್ಷರಾಗಿ ಎಚ್.ಎಸ್.ಮಂಜುನಾಥ್ ಗೌಡ ಅವರು ಪದಗ್ರಹಣ ಮಾಡಿದರು. ಇದೇ ವೇಳೆ ನೂತನ ಸದಸ್ಯರಿಗೆ ಪ್ರಮಾಣವಚನವನ್ನು ಬೋಧಿಸಿ ಮಾರ್ಗದರ್ಶನ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಕ್ತಿ ಪೂಜೆಯನ್ನು ಬಿಟ್ಟು ಪಕ್ಷ ಪೂಜೆಯನ್ನು ಮಾಡಬೇಕೆಂದು ಕರೆ ನೀಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಕರ್ನಾಟಕ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿಯ ನೂತನ ಅಧ್ಯಕ್ಷರಾಗಿ ಎಚ್.ಎಸ್.ಮಂಜುನಾಥ್ ಗೌಡ ಅವರು ಪದಗ್ರಹಣ ಮಾಡಿದರು. ಅಲ್ಲದೇ ನೂತನ ಸದಸ್ಯರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನವನ್ನು ಬೋಧಿಸಿದರು.

ನಂತರ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕರ್ನಾಟಕದಲ್ಲಿ 25 ಲಕ್ಷ ಸದಸ್ಯರು ಯುವಾ ಕಾಂಗ್ರೆಸ್ಸಿಗೆ ಸೇಪರ್ಡೆಯಾಗಿದ್ದಾರೆ. ವ್ಯಕ್ತಿ ಪೂಜೆಯನ್ನು ಬಿಟ್ಟು, ಪಕ್ಷದ ಪೂಜೆಯನ್ನು ಮಾಡಲು ಕಲಿಯಿರಿ ಎಂದು ಮಾರ್ಗದರ್ಶನ ನೀಡಿದರು. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಸದಸ್ಯತ್ವ ಪಡೆದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು. ತಾಲೂಕಾ ಮಟ್ಟದಲ್ಲಿಯೂ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಬೆಳೆಸಿಕೊಂಡು ಈ ದೇಶದ ಸಂವಿಧಾನ ಮತ್ತು ಏಕತೆಯನ್ನು ಕಾಪಾಡಿಕೊಂಡು ಹೋಗುವವನೇ ಭಾರತೀಯ. ಅವನೇ ಕಾಂಗ್ರೆಸ್ಸಿಗ ಎಂದರು. ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ತಾವೂ ಕೂಡ ಪಕ್ಷ ಬಲವರ್ಧನೆಯೊಂದಿಗೆ ರಾಜ್ಯ ಮತ್ತು ದೇಶದ ಉನ್ನತಿಗೆ ಶ್ರಮಿಸುವಂತೆ ಕರೆ ನೀಡಿದರು.

ಇನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ದೇಶದಲ್ಲಿ ಆಳುತ್ತಿರುವ ಬಿಜೆಪಿ ಸರ್ಕಾರ ಯುವ ಜನರ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ದೇಶದಲ್ಲಿ ಆಳುತ್ತಿರುವ ಪಕ್ಷವು ಯುವ ಶಕ್ತಿಯನ್ನು ದುರ್ಬಲಗೊಳಿಸುತ್ತಿದ್ದು, ಮತೀಯ ವಿಚಾರಗಳನ್ನು ಮುಂದಿಟ್ಟು ಯುವ ಜನರ ಮನಸ್ಸನ್ನು ಕಲುಷಿತಗೊಳಿಸುತ್ತಿರುವ ಬಗ್ಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಎಚ್ಚರ ವಹಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಸಂತೋಷ್ ಲಾಡ್ ವಿಧಾನ‌ ಪರಿಷತ್ ಸದಸ್ಯರಾದ ಎಸ್.ರವಿ, ಬಸನಗೌಡ ಬಾದರ್ಲಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು, ಹಿರಿಯ ಮುಖಂಡರಾದ ಬಿ.ಎಲ್.ಶಂಕರ್, ವಿನಯ್ ಕುಮಾರ್ ಸೊರಕೆ, ವಿ.ಆರ್.ಸುದರ್ಶನ್, ಯುವ‌ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Tags:

error: Content is protected !!