Belagavi

ಡಿಕೆಶಿ ಹೇಳಿಕೆಗೆ ಖಂಡಿಸಿ ಬೆಳಗಾವಿ ದಕ್ಷಿಣದಲ್ಲಿ ಬಿಜೆಪಿ ಪ್ರತಿಭಟನೆ…

Share

ಗುತ್ತಿಗೆಯಲ್ಲಿ ಶೇ. 4 ರಷ್ಟು ಮೀಸಲಾತಿ ನೀಡಲು ಸಂವಿಧಾನ ಬದಲಾವಣೆ ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಖಂಡಿಸಿ ಇಂದು ಬೆಳಗಾವಿ ದಕ್ಷಿಣದಲ್ಲಿ ಶಾಸಕ ಅಭಯ್ ಪಾಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು.

ಗುತ್ತಿಗೆಯಲ್ಲಿ ಶೇ. 4 ರಷ್ಟು ಮೀಸಲಾತಿ ನೀಡಲು ಸಂವಿಧಾನ ಬದಲಾವಣೆ ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಖಂಡಿಸಿ, ಇಂದು ಬೆಳಗಾವಿ ಶಹಾಪೂರದ ನಾಥ್ ಪೈ ವೃತ್ತದಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಭಯ್ ಪಾಟೀಲ್ ಅವರು, ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 4 ರಷ್ಟು ಮೀಸಲಾತಿಯನ್ನು ನೀಡಿ, ಸಂವಿಧಾನಕ್ಕೆ ಅಪಮಾನವನ್ನು ಮಾಡಿದೆ. ಇದಕ್ಕೆ ಇಡೀ ದೇಶದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಬಡವರು ಎಲ್ಲ ವರ್ಗದಲ್ಲಿಯೂ ಇದ್ದಾರೆ. ಆದರೇ, ಅಲ್ಪಸಂಖ್ಯಾತರಿಗೆ ಯಾಕೆ ಇಷ್ಟು ಆದ್ಯತೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ತಮ್ಮ ಸಂಪದಾನೆಯ 4 ಭಾಗ ಅನ್ಯ ಸಮುದಾಯದವರಿಗೆ ನೀಡಿದರೇ ಆಶ್ಚರ್ಯಪಡುವ ಸಂಗತಿಯಲ್ಲ. ಓಲೈಕೆ ರಾಜಕಾರಣವನ್ನು ಬಿಟ್ಟು ಸರ್ಕಾರ ಬಡವರ ಏಳ್ಗೆಗಾಗಿ ಕೆಲಸ ಮಾಡಬೇಕು ಎಂದು ಸಲಹೆಯನ್ನು ನೀಡಿದರು. ಬೈಟ್
ಈ ವೇಳೆ ನಗರಸೇವಕರು, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಇನ್ನುಳಿದವರು ಭಾಗಿಯಾಗಿದ್ದರು.

Tags:

error: Content is protected !!