hubbali

ಬೆಳ್ಳಂಬೆಳಿಗ್ಗೆ ನಟೋರಿಸ್ ರೌಡಿ ಶೀಟ‌ರ್ ಮಲ್ಲಿಕ್ ಕಾಲಿಗೆ ಗುಂಡೇಟು

Share

ಹುಬ್ಬಳ್ಳಿಯಲ್ಲಿ ಸೋಮವಾರ ರಾತ್ರಿ ಹಣಕಾಸಿನ ವಿಚಾರಕ್ಕೆ ರೌಡಿ ಶೀಟರ್‌ಗಳ ನಡುವೆ ಗ್ಯಾಂಗ್‌ವಾ‌ರ್ ನಡೆದಿತ್ತು. ಈ ಪ್ರಕರಣದಲ್ಲಿ ಆರೋಪಿಯನ್ನು ವಿಚಾರಣೆ ನಡೆಸುವಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟ‌ರ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಅರೆಸ್ಟ್ ಮಾಡಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಹೆಗ್ಗೇರಿಯಲ್ಲಿ ಸೋಮವಾರ ರಾತ್ರಿ 9 ಗಂಟೆಗೆ ಹಣಕಾಸಿನ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ರೌಡಿಶೀಟರ್‌ಗಳಾದ ಮಲ್ಲಿಕ್ ಹಾಗೂ ಇರ್ಫಾನ್ ಮಾರಕಾಸ್ತ್ರದಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಓರ್ವ ರೌಡಿ ಶೀಟರ್ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನ‌ರ್ ಶಶಿಕುಮಾ‌ರ್ ಕಿಮ್ಸ್ ಆಸ್ಪತ್ರೆಗೆ ಭೇಟಿ ಹಲ್ಲೆಗೊಳಗಾದ ಇರ್ಫಾನ್ ನಿಂದ ಮಾಹಿತಿಯನ್ನು ಪಡೆದಿದ್ದರು. ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಆರೋಪಿ ಮಲ್ಲಿಕ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ನಂತರ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾಗ ರೌಡಿ ಶೀಟರ್ ಮಲ್ಲಿಕ್ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ PSI ವಿಶ್ವನಾಥ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಘಟನೆಯಲ್ಲಿ PSI ವಿಶ್ವನಾಥ್ ಸೇರಿದಂತೆ ಇಬ್ಬರು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಿಮ್ಸ್ ಆಸ್ಪತ್ರೆಗೆ ಪೊಲೀಸ್‌ ಕಮಿಷನ‌ರ್ ಶಶಿಕುಮಾರ್ ಭೇಟಿ ನೀಡಿ ಸಿಬ್ಬಂದಿಯ ಅರೋಗ್ಯ ವಿಚಾರಿಸಿದ್ದಾರೆ.

ರೌಡಿ ಶೀಟರ್ ಮಲ್ಲಿಕ್‌ನನ್ನು ಕೂಡ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಲಿಕ್ ವಿರುದ್ಧ ಹಳೇ ಹುಬ್ಬಳ್ಳಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕೊಲೆ ಯತ್ನ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಇದೆ. ಪ್ರಕರಣದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿದ್ದು ಅವರನ್ನು ಕೂಡ ಶೀಘ್ರವೇ ಬಂಧಿಸಲಾಗುವುದು ಎಂದು ಕಮಿಷನ‌ರ್ ಶಶಿಕುಮಾ‌ರ್ ಹೇಳಿದ್ದಾರೆ.

 

Tags:

error: Content is protected !!