ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂರಿಗೆ 4% ಗುತ್ತಿಗೆ ಮೀಸಲಾತಿ ನೀಡಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಹಾಗೂ ಈ ಮೀಸಲಾತಿ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು.

ವಿಶ್ವ ಹಿಂದೂ ಪರಿಷದ್ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡಿದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಹೇಬ್ ಅಂಬೇಡ್ಕರವರು ಧರ್ಮಾಧಾರಿತ ಮೀಸಲಾತಿ ವಿರೋಧಿಸಿದ್ದಾರೆ. ಧರ್ಮಾಧಾರಿತ ಮೀಸಲಾತಿ ಸರಿಯಲ್ಲ ಎಂದಿದ್ದಾರೆ. ಜತೆಗೆ ಮುಂಜಾನೆಯಿಂದ ಬೇರೆ ಪಕ್ಷಗಳು ಸಂವಿಧಾನ ಬಿರೋಧಿ ಅನ್ನೋ ಕಾಂಗ್ರೆಸ್ ಸರ್ಕಾರ ಹಾಗೂ ನಾಯಕರುಗಳು ಈಗ ತಾವೇ ಸಂವಿಧಾನ ವಿರೋಧಿ ಹೆಜ್ಜೆ ಇಟ್ಟಿದ್ದಾರೆ.
ಸಂವಿಧಾನದ ಆಶಯಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಸರ್ಕಾರ ಓಟ ಬ್ಯಾಂಕಗಾಗಿ ಮುಸ್ಲಿಂರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ 4% ಮೀಸಲಾತಿ ನೀಡಿದೆ. ಇದು ಸರಿಲ್ಲ ಈ ಕೂಡಲೇ ಈ ನಿರ್ಧಾರದಿಂದ ರಾಜ್ಯ ಸರ್ಕರ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಹಿಂಜರಿಯದಿದ್ರೆ ಉಗ್ರ ಹೋರಾಟ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.