ಹುಬ್ಬಳ್ಳಿ – ಫ್ಲೈ ಓವರ್ ಕಾಮಗಾರಿ ವಿಳಂಬ ಹಿನ್ನೆಲೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದರು.

ಹುಬ್ಬಳ್ಳಿ. ಚನ್ನಮ್ಮ ವೃತ್ತ, ಕೋರ್ಟ್ ಸರ್ಕಲ್ ಹಾಗೂ ಉಪ ನಗರ ಬಸ್ ನಿಲ್ದಾಣದ ಬಳಿ ಕಾಮಗಾರಿ ಪರಿಶೀಲನೆ ನಡೆಸಿದ ಅವರು ಚನ್ನಮ್ಮ ವೃತ್ತದ ಬಳಿ ಕಾಮಗಾರಿ ಆರಂಭಿಸಿದಲ್ಲಿ ಕೈಗೊಳ್ಳಬೇಕಾದ ಪರ್ಯಾಯ ವ್ಯವಸ್ಥೆ ಕುರಿತು ಸಮಾಲೋಚನೆ ಸಂಚಾರಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಡಿಸಿ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಡಿಸಿಪಿ ರವೀಶ್, ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳು ಮತ್ತಿತರರು ಉಪಸ್ಥಿತರಿದ್ದರು.