Dharwad

ಹಾಸ್ಟೆಲ್‌ಗಳಲ್ಲಿ ಹೊರಗುತ್ತಿಗೆ ಏಜೆನ್ಸಿ ರದ್ದುಗೊಳಿಸುವಂತೆ ಆಗ್ರಹಿಸಿ ಧಾರವಾಡದಲ್ಲಿ ಪ್ರೊಟೆಸ್ಟ್…..AIUTUC ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ, ಆಕ್ರೋಶ

Share

ಹಾಸ್ಟೆಲ್‌ಗಳ ಹೊರಗುತ್ತಿಗೆ ಏಜೆನ್ಸಿ ರದ್ದುಗೊಳಿಸುವ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಮಾಜ ಕಲ್ಯಾಣ ಇಲಾಖೆ ಸೇರಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್‌ಗಳಲ್ಲಿ ಹೊರಗುತ್ತಿಗೆ ಏಜೆನ್ಸಿಯನ್ನು ರದ್ದು ಮಾಡಬೇಕು. ಬೀದರ್ ಸೊಸೈಟಿ ಮಾದರಿಯಲ್ಲಿ ಹಾಸ್ಟೆಲ್ ಗುತ್ತಿಗೆ ಕಾರ್ಮಿಕರ ನೇಮಕಾತಿ ಆಗಬೇಕು. ವೇತನ, ಪಿಎಫ್, ಇಎಸ್ಐ ಪಾವತಿಯಲ್ಲಿ ಆಗಿರುವ ಸಮಸ್ಯೆಗಳನ್ನು ಸರಿಪಡಿಸಬೇಕು, ರಜೆ ಹಾಗೂ 8 ಗಂಟೆ ಕೆಲಸ ಸೇರಿದಂತೆ ಶಾಸನಬದ್ಧ ಹಕ್ಕುಗಳನ್ನು ಜಾರಿಗೆ ತರಬೇಕು, ಈ ಎಲ್ಲ ಕುಂದು, ಕೊರತೆ ನಿವಾರಣೆಗೆ ಜಿಲ್ಲಾ ಪಂಚಾಯ್ತಿ ಸಿಇಓ ನೇತೃತ್ವದಲ್ಲಿ ಸಭೆ ಕರೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Tags:

error: Content is protected !!