ಬಾಗಲಕೋಟೆಯಲ್ಲಿ ಗುರುವಾರ ನಡೆದ ಬಿಜೆಪಿಯ ಜನಾಕ್ರೋಶ ಯಾತ್ರೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲು ಬೀಸುವುದರ ಮೂಲಕ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಬಾಗಲಕೋಟೆ ಬಸವೇಶ್ವರ ವೃತ್ತದಲ್ಲಿ ನಡೆದ ಜನಾಕ್ರೋಶ ಯಾತ್ರೆ ವೇದಿಕೆ ಮೇಲೆ ಬಿಜೆಪಿ ಮುಖಂಡರು ಬಾರ್ಕೋಲು ಹಿಡಿದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾಟಿ ಬೀಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ ಸಿಎಂ ಹಾಗೂ ಸರ್ಕಾರದ ವೈಫಲ್ಯತೆಗಳ ವಿರುದ್ಧ ಕಿಡಿಕಾರಿದರು.
ಮಾಜಿ ಸಿಎಂ, ಸಂಸದ ಜಗದೀಶ ಶಟ್ಟರ್, ಮಾಜಿ ಸಚಿವ ಶ್ರೀರಾಮುಲು, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮುಂತಾದ ಮುಖಂಡರು ತೀವ್ರ ವಾಗ್ದಾಳಿ ನಡೆಸಿದರು.