Dharwad

ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುತ್ತ ಕಾಲ ಹರಣ ಮಾಡುತ್ತಿದೆ: ಕೋಡಿಹಳ್ಳಿ

Share

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕೇವಲ ಸುಳ್ಳು ಹೇಳುತ್ತಲೇ ಕಾಲ ಕಳೆಯುತ್ತಿದೆ ಎಂದು ರಾಜ್ಯ ಸರ್ಕಾರದ ಮೇಲೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಕಿಡಿ ಕಾರಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಈ ಹಿಂದೆ ಕೃಷಿ ಕಾಯ್ದೆ ಮಾಡಿ ಭೂಮಿಯನ್ನು ರೈತರಲ್ಲದವರಿಗೆ ವರ್ಗಾವಣೆ ಮಾಡುವ ಕಾಯ್ದೆ ತಂದಿದ್ದರು. ಅದನ್ನು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೃಷಿ ಕಾಯ್ದೆಯನ್ನು ರದ್ದು ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಎಪಿಎಂಸಿ ಕಾಯ್ದೆಯನ್ನೂ ರದ್ದು ಮಾಡುವುದಾಗಿ ಹೇಳಿದ್ದರು. ಆದರೆ, ಇವುಗಳ ಬಗ್ಗೆ ಇದುವರೆಗೂ ಸಿದ್ದರಾಮಯ್ಯ ಮಾತನಾಡಿಲ್ಲ. ಕಾಂಗ್ರೆಸ್‌ನವರು ಬರೀ ಧರ್ಮದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ಇದೇ ರಾಜಕಾರಣ ಮುಂದುವರೆಸಿಕೊಂಡು ಬರುತ್ತಿರುವುದು ಅತ್ಯಂತ ಕೆಟ್ಟ ಸಂಸ್ಕೃತಿ. ಬಡವರು ದೀನ ದಲಿತರನ್ನು ಗುರುತಿಸುವುದನ್ನು ಬಿಟ್ಟು ಬೇರೆ ದಾರಿಯಲ್ಲೇ ಇವರು ನಡೆಯುತ್ತಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕುರಿತು ಪರ್ಯಾಯ ಚಿಂತನಾ ಸಭೆ ನಾವು ನಡೆಸಿದ್ದೇವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಭೆ ಮಾಡುತ್ತಿದ್ದೇವೆ. ಈ ವಿಚಾರವಾಗಿ ಜನತಾ ಪ್ರಣಾಳಿಕೆ ಮಾಡಿದ್ದೇವೆ. ಹೊಸ ರೈತರ ಪಕ್ಷ ಹುಟ್ಟು ಹಾಕುತ್ತಿದ್ದೇವೆ. ಅದಕ್ಕಾಗಿ ಎಲ್ಲ ಕಡೆ ಸಭೆ ನಡೆಸುತ್ತಿದ್ದೇವೆ ಎಂದು ಕೋಡಿಹಳ್ಳಿ ಹೇಳಿದರು.

 

Tags:

error: Content is protected !!