ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಕೇಂದ್ರ ಸಂಸತ್ತಿನ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಿರುವುದು ಖಚಿತವಾಗಿದ್ದು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿರುವುದು ಖಚಿತವಾಗಿದೆ. ದೊಡ್ಡ ಸಂಸ್ಥೆಯನ್ನು ಲೂಟಿ ಮಾಡಲು ಹೊರಟ್ಟಿದ್ದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಯುವಾ ಮೋರ್ಚಾ ಮಹಾನಗರ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ ಅವರು, ಕುರುಡ ಭಿಕ್ಷುಕನ ತಟ್ಟೆಗೆ ಚಿಲ್ಲರೆ ಹಾಕಿ ನೋಟು ತೆಗೆದುಕೊಳ್ಳುವ ಕೆಲಸವನ್ನು ಕಾಂಗ್ರೆಸ್ಸಿಗರು ಮಾಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಕೇವಲ 50 ಲಕ್ಷ ಹೂಡಿಕೆ ಮಾಡಿ 750 ಕೋಟಿ ರೂಪಾಯಿಯನ್ನು ಗುಳುಂ ಮಾಡಿದ್ದಾರೆ. ಅವರು ಸಾಂವಿಧಾನಿಕ ಹುದ್ಧೆಯಲ್ಲಿರುವ ನಾಲಾಯಕ್ಕು. ವಿಚಾರಣೆ ಪೂರ್ಣಗೊಳ್ಳುವ ವರೆಗೂ ತಮ್ಮ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಬಿಜೆಪಿ ಮುಖಂಡ ಮುರುಗೇಂದ್ರಗೌಡ ಪಾಟೀಲ್ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿರುವುದು ಖಚಿತವಾಗಿದೆ. ಆದ್ದರಿಂದ ಕೂಡಲೇ ರಾಹುಲ್ ಗಾಂಧಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೇ, ದೇಶಾದ್ಯಂತ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಸಚಿನ ಕಡಿ, ಕೃಷ್ಣಾ ಪಾಟೀಲ್, ಸದಾನಂದ ಗುಂಟೆಪ್ಪನವರ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.