ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಆರೋಪಗಳ ಸಲ್ಲಿಕೆ ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರವು ಡೀಸೆಲ್ ದರ ಏರಿಕೆ ಖಂಡಿಸಿ, ವಿಜಯಪುರ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ವಿಜಯಪುರ ನಗರದ ಡಾ. ಬಾಬಾಸಾಹೇಬ ಅಂಬೇಡ್ಕರ್ ವೃತ್ತದಿಂದ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
