Accident

ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ…

Share

ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಬೈಲಹೊಂಗಲ ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ಬೈಲಹೊಂಗಲದಿಂದ‌ ಹಿರೇಬಾಗೇವಾಡಿಗೆ ಬರ್ತಿದ್ದ ಅಲ್ಟೋ ಕಾರು ಹಾಗೂ ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕೀಯಾ ಕಾರು ಡಿಕ್ಕಿ ಸಂಭವಿಸಿದೆ. ಓವರ್ ಟೆಕ್ ಮಾಡಲು ಹೋಗಿ ಎದುರಿನಿಂದ ಬರ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿಯಾಗಿದ್ದು, ಅಲ್ಟೋ ಕಾರಿನಲ್ಲಿದ್ದ ಪತಿ ಅಯುಮ್, ಪತ್ನಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಘಟನೆಯಲ್ಲಿ ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಕೂಡ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ರವಾಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags:

error: Content is protected !!