Davanagere

ಕರ್ತವ್ಯ ನಿರತ ಪೊಲೀಸ್ ಮೇಲೆ ಲಾರಿ ಹರಿಸಿ ಪರಾರಿಯಾದ ಚಾಲಕ….

Share

ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಲಾರಿಹರಿಸಿ ಲಾರಿ ಸಮೇತ ಚಾಲಕ ಪರಾರಿ ಯಾದ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿದೆ

ದಾವಣಗೆರೆ ಹೆಬ್ಬಾಳು ಟೋಲ್ ಗೇಟ್ ಬಳಿ ಸಂಚಾರಿ ಪೊಲೀಸ್ ಜೊತೆ ಕಾರ್ಯನಿರ್ವಹಿಸುತ್ತಿದ್ದ ಡಿಎಆರ್ ಪೊಲೀಸ್ ಪೇದೆಯ ಲಾರಿ ಒಂದನ್ನು ನಿಲ್ಲಿಸಲು ಮುಂದಾದಾಗ ಪೇದೆ ಮೈಮೇಲೆಯೇ ಲಾರಿ ಹರಿಸಿ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.
ಘಟನೆಯಲ್ಲಿ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದ ಪೊಲೀಸ್ ಪೇದೆ ರಾಮಪ್ಪ ಪೂಜಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇನ್ನು ಸಾವನ್ನಪ್ಪಿದ ಪೊಲೀಸ್ ಪೇದೆ ರಾಮಪ್ಪ ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮ ಹಿಪ್ಪರಗಿಯಲ್ಲಿ ಸಕಲ ಸರ್ಕಾರಿ ಗೌರವಗಳಿಂದ ನಡೆಸಲಾಯಿತು. ಮೃತರ ಗೌರವಾರ್ಥ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು. ಹಾಗೂ ಮೌನಾಚರಣೆ ನಡೆಸಲಾಯಿತು. ಪೊಲೀಸ್ ಸಿಬ್ಬಂದಿ, ಸಂಬಂಧಿಗಳು, ಗ್ರಾಮಸ್ಥರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು

Tags:

error: Content is protected !!