Banglore

ತಮ್ಮ ತಪ್ಪು ಮುಚ್ಚಿಕೊಳ್ಳಲು ಪೊಲೀಸರನ್ನು ಹರಕೆ ಕುರಿ ಮಾಡಬೇಡಿ

Share

ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳಲು ಪೊಲೀಸರನ್ನು ಹರಕೆಯ ಕುರಿಯಾಗಿ ರಾಜ್ಯ ಸರ್ಕಾರ ಮಾಡಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ನಲ್ಲಿಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಫ್ಐಿಆರ್ನಲ್ಲಿ ಕೆಎಸ್ಸಿಾಎ, ಆರ್ಸಿಬಿ ಮತ್ತು ಏಜೆನ್ಸಿಯಾದ ಡಿಎನ್ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು ಆರೋಪಿ ನಂಬರ್ 2, ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂಬರ್ 3 ಎಂದು ದೂರಿದರು.ಕಾಲ್ತುಳಿತ ಹಾಗೂ 11 ಜನ ಅಮಾಯಕರ ಸಾವಿನ ಸಂಬಂಧ ಕೊನೆಗೂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಗಆರ್ ದಾಖಲಾಗಿದೆ. ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ತೆಗೆದುಕೊಂಡು ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ ನಂತರ ಸರ್ಕಾರ ಎಚ್ಚೆತ್ತುಕೊಂಡಿದೆ. ಮುಖ್ಯಮಂತ್ರಿಗಳು, ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡುವ ಬದಲಾಗಿ ತಾವೇ ಜವಾಬ್ದಾರಿ, ನೈತಿಕ ಹೊಣೆ ಹೊತ್ತು ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ ಎಂದು ಒತ್ತಾಯಿಸಿದರು.

ಇನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ವಿಜಯೋತ್ಸವ ಆಚರಣೆಗೆ ಅನುಮತಿ ನೀಡಿ ಎಂದು ಆಸಿಡಬಿಯವರು ಸಲ್ಲಿಸಿದ್ದ ಮನವಿಯನ್ನು ಕಬ್ಬನ್‌ ಪಾರ್ಕ್‌ ಪೊಲೀಸರು ತಿರಸ್ಕರಿಸಿದ್ದರು. ಪೊಲೀಸ್ ಕಮಿಷನರ್ ಅವರನ್ನು ಕರೆಸಿದ ಮುಖ್ಯಮಂತ್ರಿ, ‘ನಾನು ಹೇಳುತ್ತಿದ್ದೇನೆ. ಅನುಮತಿ ನೀಡಿ, ಭದ್ರತೆ ಒದಗಿಸಿ’ ಎಂದು ತಾಕೀತು ಮಾಡಿದರು. ಹೀಗಾಗಿ ಸಿದ್ದರಾಮಯ್ಯ ಅವರನ್ನೇ ಇದರಲ್ಲಿ ತಪ್ಪಿತಸ್ಥನನ್ನಾಗಿ ಮಾಡಬೇಕು’ ಎಂದು ಆಗ್ರಹಿಸಿದರು. ಸಿದ್ದರಾಮಯ್ಯಗೆ ಎಲ್ಲಿ ಹೆಸರು ಬಂದು ಬಿಡುತ್ತದೆಯೋ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕನಕಪುರದಿಂದ ಓಡಿ ಬಂದರು. ಆರ್‌ಸಿಬಿ ಆಟಗಾರರನ್ನು ಸ್ವತಃ ತಾವೇ ಬರಮಾಡಿಕೊಂಡರು. ವಿಧಾನಸೌಧಕ್ಕೂ ಕರೆದುಕೊಂಡು ಬಂದರು.

ಅಲ್ಲಿ ಸನ್ಮಾನದ ಬದಲಿಗೆ ಆಟಗಾರರಿಗೆ ಅವಮಾನ ಮಾಡಿದರು. ತಾವು ಮತ್ತು ತಮ್ಮ ಮಕ್ಕಳು, ಮೊಮ್ಮಕಳ ಫೋಟೊಶೂಟ್ ನಡೆಸಿದರು. ಜನರು ಸಾಯುತ್ತಿದ್ದಾಗಲೂ ರಾಜ್ಯದ ಉಪ ಮುಖ್ಯಮಂತ್ರಿ ಟ್ರೋಫಿಗೆ ಮುತ್ತಿಡುತ್ತಿದ್ದರು ಎಂದರು.  ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸರ್ಕಾರವೇ ಕಾರಣ. ಐಪಿಎಲ್ ಕಪ್ ಗೆದ್ದಿದ್ದು ಆರ್ಸಿಬಿ, ಫೋಟೋಗೆ ಪೋಸ್ ಕೊಟ್ಟಿದ್ದು ಕೆಪಿಸಿಸಿ ತಂಡ. ಅಂಧ ಮುಖ್ಯಮಂತ್ರಿ, ಅಂಧ ರಾಜ್ಯ ಎಂದು ಕಿಡಿಕಾರಿದರು.

Tags:

error: Content is protected !!