ಬಾಗಲಕೋಟೆಯಲ್ಲಿ ಶಿವಾಜಿ ಹಾಗೂ ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಸರ್ಕಾರಕ್ಕೆ ನಿರ್ದೇಶನ ನೀಡಲು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆಯಿಂದ ರಾಜ್ಯಪಾಲರಿಗೆ ಮನವಿ
ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಸ್ಥಾಪನೆಗೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ರಾಜ್ಯಪಾಲರಿಗೆ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮನವಿ ಮಾಡಿದರು
ತೋಟಗಾರಿಕೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಬಾಗಲಕೋಟೆಗೆ ಬಂದಿದ್ದ ರಾಜ್ಯಪಾಲರಿಗೆ ಭಾಂಡಗೆ ಮನವಿ ಅರ್ಪಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾತ್ರೋರಾತ್ರಿ ಶಿವಾಜಿ ಮೂರ್ತಿಸ್ಥಾಪನೆ ಮಾಡಿದ್ದರಿಂದ ವಿವಾದವಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಶಿವಾಜಿ ಮೂರ್ತಿಯನ್ನು ಜಿಲ್ಲಾಡಳಿತ ತೆರವು ಮಾಡಿತ್ತು.
ಹೀಗಾಗಿ ಶಿವಾಜಿ ಮೂರ್ತಿ ಹಾಗೂ ಬಸವೇಶ್ವರ ಮೂರ್ತಿ ಸ್ಥಾಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕಾಗಿ ಮೂರ್ತಿ ಪ್ರತಿಷ್ಠಾಪನಾ ಸಮಿತಿ ಸದಸ್ಯರು ಹಾಗೂ ಭಾಂಡಗೆ ಮನವಿ ಅರ್ಪಿಸಿದರು
