ಕರ್ನಾಟಕದಲ್ಲಿ ಸರ್ಕಾರಿ ಮನೆಗಳ ಹಂಚಿಕೆಗೆ ಲಂಚ ಪಡೆಯಲಾಗುತ್ತಿದೆ ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಮಾತನಾಡಿದ್ದಾರೆ ಎನ್ನಲಾದ ವೈರಲ್ ಆಡಿಯೋ ಸದ್ಯ ರಾಜ್ಯ ರಾಜಕೀಯದಲ್ಲಿ ಗದ್ದಲ ಸೃಷ್ಟಿಸಿದೆ. ಶಾಸಕ ಬಿ.ಆರ್ ಪಾಟೀಲ್ ಅವರು ದೂರು ನೀಡಿದರೇ, ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
ಕರ್ನಾಟಕದಲ್ಲಿ ಸರ್ಕಾರಿ ಮನೆಗಳ ಹಂಚಿಕೆಗೆ ಲಂಚ ಪಡೆಯಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫ ರಾಜ್ ಖಾನ್ ಎಂಬುವವರಿಗೆ ಫೋನ್ ಮಾಡಿ ತಮ್ಮದೇ ಸರ್ಕಾರದ ಕಾರ್ಯವೈಖರಿ ಬಗ್ಗೆ ಶಾಸಕ ಬಿ ಆರ್ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾದ ವಿಡ್ಹಿಯೋ ವೈರಲ್ ಆಗಿದೆ.
ಈ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಅವರು ಮಾತನಾಡಿದ್ದು, ಸಚಿವರಿಗೆ ನೇರವಾಗಿ ಹೇಳಿದರೇ, ಅವರೇ ಕ್ರಮ ಕೈಗೊಳ್ಳುತ್ತಾರೆ. ಬಿ.ಆರ್. ಪಾಟೀಲ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಎಲ್ಲಿ ಇದು ನಡೆಯುತ್ತಿದೆ. ಯಾರು ಲಂಚ ಕೇಳುತ್ತಿದ್ದಾರೆ ಅವರ ವಿರುದ್ಧ ದೂರು ನೀಡಲಿ. ಸಚಿವ ಝಮೀರ್ ಅಹ್ಮದ್ ಅವರಿಗೆ ಹೇಳಿದರೇ, ಅವರು ವಿಚಾರಿಸಿ ಕ್ರಮಕೈಗೊಳ್ಳುತ್ತಾರೆ ಎಂದರು.