ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ಅಪರಿಚಿತ ಯುವಕನ ಶವವು ಉದ್ಯಾನವನದ ಲ್ಲಿ ಪತ್ತೆಯಾಗಿದ್ದು ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿರೋ ಶಂಕೆ ವ್ಯಕ್ತವಾಗಿದೆ.
ವಿಜಯಪುರ ನಗರದ ಸೈನಿಕ್ ಸ್ಕೂಲ್ ಎದುರಿನ ಉದ್ಯಾನವನದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಪರಿಚಿತ ಯುವಕನ ಗುರುತು ಪತ್ತೆಗೆ ಮುಂದಾಗಿದ್ದಾರೆ. ಜಿಲ್ಲಾಸ್ಪತ್ರೆಗೆ ಶವ ರವಾನಿಸಲಾಗಿದೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.