ಕುರಿಗಾಹಿಗಳ ಹಿತರಕ್ಷಣೆಗಾಗಿ ವಿಶೇಷ ಕಾಯ್ದೆ ತರಬೇಕೆಂದು ಆಗ್ರಹಿಸಿ, ಅವರು ತಮ್ಮ ಕುರಿಗಳನ್ನು ತಹಶೀಲ್ದಾರ್ ಕಚೇರಿ ಒಳಗೆ ನುಗ್ಗಿಸಲು ಪ್ರಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನೂರಾರು ಕುರಿಗಾಹಿಗಳು ಇಂದು ಬೃಹತ್ ಹೋರಾಟ ನಡೆಸಿದರು. ಕುರಿಗಾಹಿಗಳ ಹಿತರಕ್ಷಣೆಗಾಗಿ ವಿಶೇಷ ಕಾಯ್ದೆ ತರಬೇಕೆಂದು ಆಗ್ರಹಿಸಿ, ಅವರು ತಮ್ಮ ಕುರಿಗಳನ್ನು ತಹಶೀಲ್ದಾರ್ ಕಚೇರಿ ಒಳಗೆ ನುಗ್ಗಿಸಲು ಪ್ರಯತ್ನಿಸಿದರು.
ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರು ಮತ್ತು ಕುರಿಗಳನ್ನು ತಹಶೀಲ್ದಾರ್ ಕಚೇರಿಯ ಗೇಟ್‌ನಲ್ಲೇ ತಡೆದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು.
ಕುರಿಗಾಹಿಗಳು ತಮ್ಮ ಬದುಕು ಮತ್ತು ಪ್ರಾಣಿಗಳ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅವರು ಹತಾಶರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.