ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ನಿಜಕ್ಕೂ ಬೇಸರದ ಸಂಗತಿ. ಇದು ಕೋವಿಡ್ ಲಸಿಕೆಯಿಂದ ಆಗುತ್ತಿದೆ ಎನ್ನುತ್ತಿರುವುದು ಬೇಜಾವಾಬ್ದಾರಿತನದ ಪರಮಾವಧಿ. ವಿಶ್ವದ 150 ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ಲಸಿಕೆ ಹೋಗಿದೆ. ಆದ್ರೆ ಸಿಎಂ ಸಿದ್ದರಾಮಯ್ಯ ಅವರು ಬೇಜಾವಾಬ್ದಾರಿತನದ ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು ಕೋವಿಡ್ ಲಸಿಕೆ ಇಡೀ ವಿಶ್ವವೇ ಭಾರತವನ್ನ ಕೊಂಡಾಡಿದೆ. ಆದ್ರೆ ಈ ರೀತಿ ಹೇಳಿಕೆ ನೀಡುತ್ತಿರುವುದು ದೇಶಕ್ಕೆ ಮಾಡುವ ಅಪಮಾನ ಹಾಗೂ.ಯುದ್ಧದ ಸಮಯದಲ್ಲೂ ಪಾಕಿಸ್ತಾನ ನೀಡಿದಂತಹ ಹೇಳಿಕೆಯನ್ನ ಕಾಂಗ್ರೆಸ್ ನವರು ನೀಡಿದ್ರು
ಚೀನಾ ವಿಚಾರವಾಗಿಯೂ ಬೇಜಾವಾಬ್ದಾರಿತನದ ಹೇಳಿಕೆ ನೀಡುತ್ತಾರೆ. ಈಗ ಕೋವಿಡ್ ಲಸಿಕೆ ಹಾಗೂ ಹೃದಯಾಘಾತದ ಬಗ್ಗೆ ವಿಶೇಷ ಕಮೀಟಿ ವರದಿ ನೀಡಿದೆ.
ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿಲ್ಲ ಎಂಬ ವರದಿ ನೀಡಿದೆ. ಸಿಎಂ ಸಿದ್ಧರಾಮಯ್ಯ ಅವರು ಈ ಬಗ್ಗೆ ಕ್ಷಮೆ ಕೇಳಬೇಕು . ಸಿದ್ಧರಾಮಯ್ಯ ಅವರೂ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ. ವಿದೇಶದ ವ್ಯಾಕ್ಸಿನ್ ತೆಗೆದುಕೊಂಡಿದ್ದಾರಾ..? ಮೋದಿಯವರು ನೇತೃತ್ವ ಎಂಬ ಕಾರಣಕ್ಕೆ ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ ಎಂದರು. ರಾಜ್ಯ ಸರ್ಕಾರ ರಚನೆ ಮಾಡಿರುವ ಕಮೀಟಿಯೇ ಈಗಾಗಲೇ ವರದಿ ನೀಡಿದೆ. ನಿಮ್ಮ ಸರ್ಕಾರ ರಚನೆ ಮಾಡಿದ ಸಮೀತಿಯೇ ಅಧ್ಯಯನ ಮಾಡಿದೆ. ಹೀಗಾಗಿ ಸಿದ್ಧರಾಮಯ್ಯ ಅವರು ಕ್ಷಮೆ ಕೇಳ್ತಾರಾ..? ಎಂದು ಪ್ರಶ್ನಿನಿಸಿದರು.
ಯಾವುದೇ ಆಧಾರವಿಲ್ಲದೇ ಈ ರೀತಿ ಮಾತನಾಡುವುದು ಸಮಂಜಸವಲ್ಲ. ಈಗಾಗಲೇ ಸಿದ್ಧರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಇದರಿಂದ ವೈಜ್ಞಾನಿಕ ಸಮೀತಿಗೇ ಅವಮಾನ ಮಾಡಿದಂತಾಗಿದೆ. ಸಿಎಂ ಸಿದ್ಧರಾಮಯ್ಯ ಅವರು ವೈಜ್ಞಾನಿಕ ಕಮೀಟಿಯ ಕ್ಷಮೆ ಕೇಳಬೇಕು ಎಂದರು. ಸಿದ್ದರಾಮಯ್ಯ ಅವರಿಗೆ ಇಲ್ಲಿಯೇ ಸಂಬಳಿಸಲು ಸಾಧ್ಯವಾಗುತ್ತಿಲ್ಲ, ಕೇಂದ್ರಕ್ಕೆ ಹೋಗಿ ಏನ್ ಮಾಡ್ತಾರೆ..? ಎಂದರು. ಮುಖ್ಯಮಂತ್ರಿ ಸ್ಥಾನ ತೆಜಿಸಿ, ದೆಹಲಿಗೆ ಬನ್ನಿ ಎಂಬ ಸಂದೇಶ ರವಾನಿಸಿದಂತಿದೆ ಅವರಿಗೆ ಒಳ್ಳೆಯದಾಗಲಿ. ರಾಷ್ಟ್ರೀಯ ಹಿಂದುಳಿದ ವರ್ಗಕ್ಕೆ ಈ ಸಂದರ್ಭದಲ್ಲಿ ನೇಮಿಸುವ ಉದ್ದೇಶವಾದ್ರು ಏನಿತ್ತು?
ಡಿಕೆಶಿಯಾವರು ಇಂಟರ್ನಲ್ ಆಗಿ ಸಾಕಷ್ಟು ಜನರಿಗೆ ಹೇಳುತ್ತಿದ್ದಾರೆ. ನಾನೇ ಮುಂದಿನ ಮುಖ್ಯಮಂತ್ರಿ ಅಂತ ಹೇಳುತ್ತಿದ್ದಾರೆ. ಇತ್ತಿಚೆಗೆ ಡಿಕೆಶಿಗೆ ವೈರಾಗ್ಯ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.