Bagalkot

ವಿವಿಧ ಬೇಡಿಕೆ ಈಡೇರಿಕೆಗೆ ಸಿ.ಐ.ಟಿ.ಯು ಪ್ರತಿಭಟನೆ

Share

ಭಾರತ ಬಂದ್ ಕರೆ ಹಿನ್ನೆಲೆ, ಬಾಗಲಕೋಟೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಬಾಗಲಕೋಟೆಯಲ್ಲಿ ಇಂದು ಪ್ರತಿಭಟನೆ ನಡೆಯಿತು.

ಬಾಗಲಕೋಟೆ ಜಿಲ್ಲಾ ಆಡಳಿತ ಭವನದ ಮುಂಭಾಗದಲ್ಲಿ ಇಂದು ಸಾವಿರಾರು ಮಹಿಳಾ ಕಾರ್ಮಿಕರು ಧರಣಿ ನಡೆಸಿದರು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ನೌಕರರು, ಬಿಸಿಯೂಟ ಮತ್ತು ಅಕ್ಷರ ದಾಸೋಹದ ಮಹಿಳೆಯರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಕೇಂದ್ರ ಸರ್ಕಾರದ ನಿರ್ಲಕ್ಷತೆ ವಿರುದ್ಧ ಘೋಷಣೆಗಳನ್ನು ಕೂಗಿ, ನೂತನ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಕ್ಕುಗಳ ಸಿಐಟಿಯು (CITU) ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಿದರು.

Tags:

error: Content is protected !!