Bagalkot

ಭಾರಿ ಮಳೆಗೆ ಬಾಗಲಕೋಟೆಯಲ್ಲಿ ಹೆಚ್ಚಿದ ಪ್ರವಾಹ ಭೀತಿ !!!

Share

ಮಹಾರಾಷ್ಟ್ರ ಹಾಗೂ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ನೆರೆ ಭೀತಿ ಹೆಚ್ಚುತ್ತಿದೆ.

ಕೃಷ್ಣಾ ನದಿಗೆ ಈಗ 1 ಲಕ್ಷ 7 ಸಾವಿರ ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ಆಲಮಟ್ಟಿಯ ಹಿನ್ನೀರು ಮಟ್ಟ ದಿನದಿಂದ ದಿನಕ್ಕೆ ಏರುತ್ತಿದೆ. ಹಿಪ್ಪರಗಿ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತಿದೆ. ಘಟಪ್ರಭಾ ನದಿಗೂ ಈಗ 15 ಸಾವಿರ ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ನದಿ ತೀರದ ಗ್ರಾಮಗಳಿಗೆ ಬಾಗಲಕೋಟೆ ಜಿಲ್ಲಾಡಳಿತ ಎಚ್ಚರಿಕೆ ಸೂಚನೆ ನೀಡಿದೆ. ಮುಂದಿನ ಕೆಲ ದಿನಗಳಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಜಮಖಂಡಿ, ಮುಧೋಳ ಹಾಗೂ ರಬಕವಿ ಬನಹಟ್ಟಿ ತಾಲ್ಲೂಕುಗಳಿಗೆ ಸೂಚನೆ ನೀಡಲಾಗಿದೆ.

Tags:

error: Content is protected !!