ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ನೂತನ ಅಧ್ಯಕ್ಷರಾಗಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಗಾಂಧಿ ನಗರದಲ್ಲಿನ ನಿವೃತ್ತ ಶಿಕ್ಷಕರಾದ ಶಿವಾನಂದ ಕುಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಆಯ್ಕೆ ಖಾನಾಪೂರ ಪಟ್ಟಣದ ಸಂತ ಜ್ಞಾನೇಶ್ವರ ಮಂದಿರದಲ್ಲಿ ನಡೆದ ಖಾನಾಪೂರ ತಾಲೂಕು ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಸಭೆಯಲ್ಲಿ ನಡೆಯಿತು. ಈ ಸಭೆಯನ್ನು ಸಿ.ಎಮ್. ಪವಾರ ಮತ್ತು ವಿ.ಎಂ. ಬನೋಶಿ ಅವರ ಸೂಚನೆಯಂತೆ, ಜಿಲ್ಲಾ ಘಟಕದ ಅಧ್ಯಕ್ಷರಾದ ಎಸ್.ಬಿ. ಸಿದ್ನಾಳ ಅವರು ಸಂಘದ ಬೈ ಲಾ ಪ್ರಕಾರ ಪದಾಧಿಕಾರಿಗಳ ಆಯ್ಕೆ ಮಾಡಿದರು.
ಈ ಸಂದರ್ಭದಲ್ಲಿ ನಿವೃತ್ತ ಸರಕಾರಿ ನೌಕರರ ಸಂಘದ ಅನೇಕ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಅಲ್ಲದೆ, ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಹಾಗೂ ಹಲವಾರು ಗಣ್ಯರು ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದ ಪದಾಧಿಕಾರಿಗಳ ಆಯ್ಕೆಯು ಸಹ ಸೌಹಾರ್ದಪೂರ್ವಕವಾಗಿ ನಡೆಯಿತು.