ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಆದರೆ ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ನಡುವೆ ಅಂತರ ರಾಜ್ಯ ಜಲವಿವಾದವಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆಯ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ ಮತ್ತು ತೀರ್ಪಿನನ್ವಯ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವುದೇ ನಷ್ಟವೂ ಆಗುವುದಿಲ್ಲ ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀ ಗಳಿಗೆ ಹೆಚ್ಚಿಸಲು ಅನುಮತಿ ನೀಡಿದ್ದಾರೆ ಎಂದರು.
ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಕುರಿತು ಪ್ರತಿಕ್ರಿಯಿಸಿ ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ.
ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,
ಈ ರೀತಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಸಂವಿಧಾನ ಬದ್ಧವಾಗಿ ಸಾಮಾಜಿಕ ನ್ಯಾಯದ ಪರವಾಗಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಪಕ್ಷವಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು