ಸಹೋದ್ಯೋಗಿ ಶಿಕ್ಷಕನ ಚಪ್ಪಲಿಯಿಂದ ಹಲ್ಲೆ ಮಾಡಿದ ಶಿಕ್ಷಕಿಯನ್ನು ಅಮಾನತ್ತುಗೊಳಿಸಿದ ಘಟನೆ ಇಳಕಲ್ ನಗರದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಮೀನಾ ಕೊಳೂರುನನ್ನು ಅಮಾನತ್ತುಗೊಳಿಸಲಾಗಿದೆ. ಶಿಕ್ಷಕ ಅಂದಾನಯ್ಯ ವಸ್ತ್ರದಗೆ ಶಿಕ್ಷಕಿ ಅಮೀನಾ ಚಪ್ಪಲಿಯಿಂದ ಹೊಡೆದಿದ್ದಾರೆಂಬ ಆರೋಪ ಕೇಳಿ ಬಂದಿದೆ. ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮಗಳು 2021 ರ ನಿಯಮಗಳ ಉಲ್ಲಂಘಟನೆ ಆರೋಪದಡಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಶಿಕ್ಷಕಿಯನ್ನು ಅಮಾನತ್ತು ಮಾಡಲಾಗಿದೆ. ಜುಲೈ 24 ರಂದು ಸ್ವಾತಂತ್ರೋತ್ಸವದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.ಈ ವೇಳೆ ಈ ಘಟನೆ ನಡೆದಿದೆ. ಬಳಿಕ ಶಿಕ್ಷಕಿ ವಿರುದ್ಧ ಪೊಲೀಸ್ ಠಾಣೆಗೆ ಶಿಕ್ಷಕ ಅಂದಾನಯ್ಯ ದೂರು ನೀಡಲು ಮುಂದಾಗಿದ್ದರು. (ಫ್ಲೋ
