Banglore

ಮೋದಿ ಮತಗಳ್ಳತನ ಮಾಡಿ ಪಿಎಂ ಆಗಿದ್ದಾರೆ…

Share

ಪಿಎಂ ನರೇಂದ್ರ ಮೋದಿ ಅವರು ಮತಗಳ್ಳತನ ಮಾಡಿ ಪ್ರಧಾನ ಮಂತ್ರಿಯಾಗಿದ್ದಾರೆ. ಚುನಾವಣಾ ಆಯೋಗ ಮತ್ತು ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ನಾವು 100% ಸಾಬೀತುಪಡಿಸಿದ್ದೇವೆ ಎಂದು ರಾಗಾ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ನಡೆದ ಕಾಂಗ್ರೆಸ್ಸಿನ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನಾ ಸಮಾವೇಶದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನಾವು ಸಂವಿಧಾನ ಉಳಿಸುವ ಕೆಲಸ ಮಾಡಿದೆವು. ಸಂವಿಧಾನ ಪುಸ್ತಕದಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ. ಗಾಂಧೀಜಿ, ಅಂಬೇಡ್ಕರ್, ನೆಹರೂ, ಪಟೇಲ್‌ರ ಧ್ವನಿ ಇದೆ. ಬಸವಣ್ಣ, ಫುಲೆಯವರ ಧ್ವನಿಯೂ ಇದೆ. ಈ ಪುಸ್ತಕದ ಅಡಿಪಾಯ ಒನ್ ಮ್ಯಾನ್, ಒನ್ ಹೋಪ್, ಒಬ್ಬನಿಗೆ ಒಂದೇ ಮತ. ಭಾರತೀಯರಿಗೆ ಈ ಪುಸ್ತಕ ಒಂದೇ ಮತದ ಹಕ್ಕು ಕೊಟ್ಟಿದೆ. ಆದರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಮೋದಿಯವರು ಈ ಗ್ರಂಥದ ಮೇಲೆ ಆಕ್ರಮಣ ಮಾಡಿದ್ದಾರೆ. ಸಂವಿಧಾನ ಮುಗಿಸುವ ಷಡ್ಯಂತ್ರ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ನಮ್ಮ ಆಂತರಿಕ ಸರ್ವೆ ನಮಗೆ 16 ಕ್ಷೇತ್ರದಲ್ಲಿ ಗೆಲ್ಲುವ ವರದಿ ಕೊಟ್ಟಿತ್ತು. ಆದರೆ, ನಾವು ಗೆದ್ದಿದ್ದು 9 ರಲ್ಲಿ ಮಾತ್ರ. ಹಾಗಾಗಿ ನಾವು ಪ್ರಶ್ನೆ ಕೇಳಲು ಮುಂದಾಗಿದ್ದೇವೆ. ನಾವು ನಿಜಕ್ಕೂ ಈ ಕ್ಷೇತ್ರಗಳಲ್ಲಿ ಸೋತೆವಾ? ಅಥವಾ ಬಿಜೆಪಿ ಕೈವಾಡ ಇದೆಯಾ ಅಂತ ಕೇಳಿದೆವು. ಹಾಗಾಗಿ, ನಾವು ಒಂದು ಲೋಕಸಭಾ ಕ್ಷೇತ್ರ ಮುಂದಿಟ್ಟು ಪ್ರಶ್ನೆ ಕೇಳಲು ಮುಂದಾಗಿದ್ದೇವೆ. ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಅಕ್ರಮ ಬಗ್ಗೆ ಪ್ರಶ್ನೆ ಮಾಡಿದ್ವಿ. ಮಹಾದೇವಪುರದಲ್ಲಿ 6.5 ಲಕ್ಷ ಮತಗಳಿವೆ, ಈ ಪೈಕಿ 1,00,250 ಮತಗಳ ಕಳವು ಆಗಿವೆ. ಪ್ರತಿ ಆರು ಮತಗಳಲ್ಲಿ ಒಂದು ಮತದ ಕಳವು ಮಾಡಲಾಗಿದೆ. ಐದು ಹಂತದಲ್ಲಿ ಮತ ಕಳವು ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನಕಲಿ ಮತ ಹಾಕಿದ ಒಬ್ಬ ಕರ್ನಾಟಕದಲ್ಲೂ ಉತ್ತರ ಪ್ರದೇಶದಲ್ಲೂ, ಮಹಾರಾಷ್ಟ್ರದಲ್ಲೂ ಮತ ಹಾಕ್ತಾನೆ. ಈ ಥರ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಈ ವ್ಯಕ್ತಿಗೆ ಮತಚೀಟಿ ಇದೆ. ಮತ ಹಾಕುವ ಹಕ್ಕು ಪಡೆದಿದ್ದಾನೆ. ಇವತ್ತು ಚುನಾವಣಾ ಆಯೋಗ ನನ್ನಿಂದ ಪ್ರಮಾಣ ಪತ್ರ ಕೇಳ್ತಿದೆ. ನಾನು ಸಂಸತ್‌ನಲ್ಲಿ ಪ್ರತಿಜ್ಞೆ ಮಾಡಿದ್ದೇನೆ. ಸಂವಿಧಾನದ ಮೇಲೆ ಪ್ರತಿಜ್ಞೆ ಮಾಡಿದ್ದೇನೆ. ನಾನು ಹೇಳೋದು ಸತ್ಯ ಅಂತ ಪ್ರತಿಜ್ಞೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಸಂಸದರು ಸೇರಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

Tags:

error: Content is protected !!