ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮುಚ್ಚಲಾಗಿರುವ ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯನ್ನು ಪುನರಾರಂಭಿಸುವಂತೆ ಆಗ್ರಹಿಸಿ ಹಳೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಶಾಲೆಯನ್ನು ಕೂಡಲೇ ತೆರೆಯಬೇಕೆಂದು ಒತ್ತಾಯಿಸಿದ ಅವರು, ಸರ್ಕಾರಕ್ಕೆ ನಡೆಸಲು ಸಾಧ್ಯವಾಗದಿದ್ದರೆ ನಾವೇ ಅನುದಾನ ನೀಡಿ ಶಾಲೆ ನಡೆಸುತ್ತೇವೆ ಎಂದು ಹೇಳಿದರು. ಈ ಶಾಲೆಯಿಂದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದು ಉನ್ನತ ಹುದ್ದೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
