Gokak

ಸರ್ಕಾರಿ ಶಾಲೆ ಅಭಿವೃದ್ಧಿಗೆ ಬದ್ದ: ಸಂಸದೆ ಪ್ರಿಯಂಕಾ ಜಾರಕಿಹೊಳಿ

Share

ಹುದಲಿ ಗ್ರಾಮದಲ್ಲಿ 3ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕನ್ನಡ ಪ್ರೌಢ ಶಾಲೆಯ ಅಡಿಗಲ್ಲು ಸಮಾರಂಭ

ಬೆಳಗಾವಿ: ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಶಾಲಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳ ಕಲಿಕೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಹುದಲಿ ಗ್ರಾಮದ ಸುತಮುತ ಎಲ್ಲ ಗ್ರಾಮದ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂಬ ಆಶಯದಿಂದ ಈ ಕಾರ್ಯಕ್ಕೆ ಚಾಲನೆ ದೊರೆತಿದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದರು.

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಗ್ರಾಮದ ಕನ್ನಡ ಪ್ರಾಥಮಿಕ ಶಾಲಾ ಆವರಣದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಹಾಗೂ ಲೋಕೋಪಯೋಗಿ ಇಲಾಖೆಯ ಅನುದಾನದಡಿ ಸುಮಾರು 3ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕನ್ನಡ ಪ್ರೌಢ ಶಾಲೆಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ನಂತರ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಮಹಾತ್ಮ ಗಾಂಧೀಜಿ ಭಾವನಕ್ಕೆ ಭೇಟಿ ನೀಡಿ, 1937ರಲ್ಲಿ ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿ, ಅವರ ಜೀವನ ಚರಿತ್ರೆಯ ಸಂಕ್ಷಿಪ್ತ ವೀಕ್ಷಣೆ ಮಾಡಿದರು. ಈ ವೇಳೆ ಪಿಕೆಪಿಎಸ್ ಬ್ಯಾಂಕ್ ಆವರಣದಲ್ಲಿ ನೂತನ ಡಿಸಿಸಿ ಬ್ಯಾಂಕ್ ಶಾಖೆ ಉದ್ಘಾಟನೆಗೂ ಚಾಲನೆ ನೀಡಿದರು. ಇದೇ ವೇಳೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ವೇದಿಕೆ ಮೇಲಿದ್ದ ಗಣ್ಯರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅಂಕಲಗಿ ಶ್ರೀ ಅಡ್ಡಿವಿಸಿದ್ದೇಶ್ವರ ಮಠದ ಅಮರಸಿದ್ಧೇಶ್ವರ ಸ್ವಾಮೀಜಿ, ಸಚಿವರ ಆಪ್ತ ಸಹಾಯಕ ಅರವೀಂದ ಕಾರ್ಚಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಜು ಅಂಕಲಗಿ, ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಬೆಳಗಾವಿಯ ಹಿರಿಯ ಅಧಿಕಾರಿಗಳು ಜಿಲ್ಲಾ ಪಂ. ಸದಸ್ಯರು, ತಾಪಂ ಸದಸ್ಯರು, ಗ್ರಾಪಂ. ಅಧ್ಯಕ್ಷ ಹಾಗೂ ಸದಸ್ಯರು, ಪಿಕೆಪಿಎಸ್ ಅಧ್ಯಕ್ಷರು, ಉಪಾಧ್ಯಕ್ಷರು, ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಯುವ ನಾಯಕರು, ಮಂಚೂಣಿ ಘಟಕದ ಅಧ್ಯಕ್ಷರು ಹಾಗೂ ಕೆ.ಡಿ.ಪಿ ಸದಸ್ಯರು,ಎಸ್.ಡಿ.ಎಮ್.ಸಿ.ಅಧ್ಯಕ್ಷರು ಉಪಾಧ್ಯಕ್ಷರು .ಸದಸ್ಯರು ಮಾಜಿ ಸೈನಿಕರು. ಹುದಲಿ ಜಿಲ್ಲಾ ಪಂ ವ್ಯಾಪ್ತಿಯ ಎಲ್ಲಾ ಗ್ರಾಮದ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು

Tags:

error: Content is protected !!