ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಮಾದಕ ವಸ್ತುಗಳ ನಿಷೇಧ ಸೇರಿ ಅತ್ಯಾಚಾರಕ್ಕೆ ಪ್ರಚೋದನೆ ಮಾಡುವ ವೆಬ್‌ಸೈಟ್‌ಗಳನ್ನು ನಿಷೇಧ ಮಾಡಲು ಆಗ್ರಹಿಸಿ, ಧಾರವಾಡದಲ್ಲಿ ಹೆಣ್ಮಕ್ಕಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಧಾರವಾಡ ವಿವೇಕಾನಂದ ವೃತದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿನಿಯರು ಸೇರಿ ಮಹಿಳೆಯರು ಅತ್ಯಾಚಾರಿಗಳ ವಿರುದ್ಧ ಹಾಗೂ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ದೇಶ ಸೇರಿ ರಾಜ್ಯದಲ್ಲಿ ಇತ್ತೀಚಿನ ದಿನಗಳನ್ನು ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳ ಹೆಚ್ಷಾಗಿವೆ. ಮಾದಕ ವಸ್ತುಗಳ ಸೇರಿ ಅತ್ಯಾಚಾರಕ್ಕೆ ಪ್ರಚೋದಿಸುತ್ತದೆ ನೀಡುವ ವೆಬ್ ಸೈಟ್‌ಗಳು ಮಹಿಳಾ ದೌರ್ಜನ್ಯಕ್ಕೆ ಮುಖ್ಯ ಕಾರಣಗಳಾಗಿವೆ. ಈ ಎಲ್ಲ ಕಾರಣಗಳಿಂದಾಗಿ ಮಹಿಳೆಯರು, ವಿದ್ಯಾರ್ಥಿನಿಯರು ನಿರ್ಭಯವಾಗಿ ಓಡಾಡಲು ಹಿಂದೆ ಮುಂದೆ ನೋಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಮಹಿಳೆಯರ ಕಾಣೆಯಾಗು ಪ್ರಕರಣಗಳು ಕೂಡಾ ಮಿತಿಮಿರಿವೇ. ಹಾಗಾಗಿ ಈ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ಮೇಲಿನ ದೌರ್ಜನ್ಯ ಸೇರಿ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಪ್ರಚೋಧನೆ ನೀಡುವ ಮಾದಕ ವಸ್ತುಗಳು ಮತ್ತು ಅಶ್ಲೀಲ ವೆಬ್ ಸೈಟಗಳನ್ನು ನಿಷೇಧ ಮಾಡಬೇಕು. ಇದರ ಜತೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ತಡೆಯುವ ನಿಟ್ಟಿನಲ್ಲಿ ಅತ್ಯಂತ ಕಠಿಣ ಕಾನೂನು ಜಾರಿಗೆ ತರುವಂತೆ ಆಗ್ರಹಿಸಿದರು. ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದರು.