ಇನ್ನೋವಾ ಕಾರು ಮತ್ತು ಟಂಟಂ ನಡುವೆ ತಡರಾತ್ರಿ ನಡೆದ ಭೀಕರ ಮುಖಾಮುಖಿ ಅಪಘಾತದಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ನವನಗರದ 45 ಸೆಕ್ಟರ್ ನಿವಾಸಿಗಳಾದ ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್ (30) ಮೃತರು. ವಿಶಾಲ್ ವರತಿಲ್ಲೆ, ವಿಜಯಕುಮಾರ್ ಭೋವಿ ಮತ್ತು ಗುರುಪ್ರಸಾದ್ ಸುಂಕದ ಎಂಬ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟಂಟಂ ವಾಹನದಲ್ಲಿ ಐವರು ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ಊಟಕ್ಕೆ ತೆರಳಿ ಬಾಗಲಕೋಟೆ ಕಡೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಮಹಿಂದ್ರಾ ಪಿಕ್ ಅಪ್ ವಾಹನವನ್ನು ಓವರ್ಟೇಕ್ ಮಾಡಲು ಮುಂದಾದ ಇನ್ನೋವಾ ಚಾಲಕನ ಅಜಾಗರೂಕ ಚಾಲನೆಯಿಂದ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟಂಟಂ ಗೆ ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Accident
ಇನ್ನೋವ್ಹಾ ಕಾರ್-ಟಂಟಂ ಮುಖಾಮುಖಿ ಡಿಕ್ಕಿ ಇಬ್ಬರ ದುರ್ಮರಣ!!!
