Accident

ರಸ್ತೆ ಅಪಘಾತ ವ್ಯಕ್ತಿ ಸಾವು.

Share

ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಮಧುರಖಂಡಿ ಕ್ರಾಸ್ ಬಳಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಮಧುರಖಂಡಿ ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬಸವರಾಜ ಕಾನಗೊಂಡ (42) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ.ರಬಕವಿ-ಬನಹಟ್ಟಿ ನಗರದಿಂದ ಜಮಖಂಡಿ ಮಾರ್ಗವಾಗಿ KA 48 X 9555 ನಂಬರಿನ ಸ್ಕೂಟಿಯಲ್ಲಿ ಬರುತ್ತಿದ್ದ ಬಸವರಾಜ ಕಾನಗೊಂಡ ಅವರು ಅಪಘಾತಕ್ಕೀಡಾಗಿದ್ದಾರೆ. ಮೃತದೇಹವು ರಸ್ತೆಯ ಪಕ್ಕದಲ್ಲಿ ಬಿದ್ದಿದ್ದು, ಅದರ ಪಕ್ಕದಲ್ಲೇ ಸ್ಕೂಟಿ ಪತ್ತೆಯಾಗಿದೆ. ಘಟನೆಯ ಸ್ವರೂಪವನ್ನು ಗಮನಿಸಿದರೆ, ಯಾವುದೋ ಅಪರಿಚಿತ ವಾಹನವು ಸ್ಕೂಟಿಗೆ ಡಿಕ್ಕಿ ಹೊಡೆದು ನಂತರ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧುರಖಂಡಿ ಕ್ರಾಸ್ ಬಳಿ ನಡೆದ ಈ ದುರ್ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾದ ವಾಹನ ಮತ್ತು ಅದರ ಚಾಲಕನನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.

Tags:

error: Content is protected !!