hubbali

ಮಲಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಚನ್ನರಾಜ ಹಟ್ಟಿಹೊಳಿ ಅಧಿಕಾರ ಸ್ವೀಕಾರ

Share

ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಆಯ್ಕೆಯಾಗಿದ್ದು, ಇಬ್ಬರೂ ಗುರುವಾರ ಅಧಿಕಾರ ಸ್ವೀಕರಿಸಿದರು.

ಇದಕ್ಕೂ ಮುನ್ನ ಈ ಭಾಗದ ಶಕ್ತಿ ದೇವತೆ ಶ್ರೀ ಬಂಡೆಮ್ಮ ದೇವಿಯ ಹಾಗೂ ವಿಘ್ನ ವಿನಾಶಕ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಜವಾಬ್ದಾರಿ ವಹಿಸಿಕೊಂಡರು.

ರೈತರ ಪುನಶ್ಚೇತನ ಪ್ಯಾನಲ್ ನ ಸದಸ್ಯರು, ಸುತ್ತಮುತ್ತಲಿನ ಗ್ರಾಮಗಳ ರೈತರು, ಕಾರ್ಖಾನೆಯ ಕಾರ್ಮಿಕರ ಸಮ್ಮುಖದಲ್ಲಿ ನಡೆದ ಈ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ, ಕಾರ್ಖಾನೆಯ ಸರ್ವತೋಮುಖ ಅಭಿವೃದ್ಧಿ ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಸಂಕಲ್ಪ ಮಾಡಿದರು.

Tags:

error: Content is protected !!