ಚಿಕ್ಕೋಡಿಯಲ್ಲಿ ಪ್ರಥಮ ಬಾರಿಗೆ ಅಂತರ ಮಹಾವಿದ್ಯಾಲಯ ಮಹಿಳಾ ಕಬಡ್ಡಿ ಹಾಗೂ ರಾಷ್ಟ್ರಮಟ್ಟದ ಮುಕ್ತ ಮಹಿಳಾ ಪ್ರೊ ಕಬಡ್ಡಿ ಪಂದ್ಯಾವಳಿಗಳು ಅ.14 ರಂದು ಬೆಳಿಗ್ಗೆ 8 ಗಂಟೆಗೆ ಚಿಕ್ಕೋಡಿ ಆರ್.ಡಿ. ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ ಎಂದು ಸಂಸ್ಥೆ ನಿರ್ದೇಶಕ ಸತೀಶ ಕುಲಕರ್ಣಿ ಹೇಳಿದರು. ಚಿಕ್ಕೋಡಿಯ ಆರ್.ಡಿ. ಹೈಸ್ಕೂಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಿತ ಸಿಟಿಇ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾಗಿರುವ ಶ್ರೀಮತಿ ಅಹಲ್ಯಾಬಾಯಿ ಅಪ್ಪನಗೌಡ ಪಾಟೀಲ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದರು.
ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ವಿಜಯಪುರದ ಕುಲಪತಿ ವಿಜಯಾ ಕೋರಿಶೆಟ್ಟರ ವಿಶೇಷ ಆಹ್ವಾನಿತರಾಗಿ ಹಾಗೂ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಪ್ರೋ ಹನುಮಂತಯ್ಯ ಪುಜಾರಿ ಬಿಇಓ ಪ್ರಭಾವತಿ ಪಾಟೀಲ ಆಗಮಿಸುವರು. ಸಿಟಿಇ ಸಂಸ್ಥೆ ಅಧ್ಯಕ್ಷ ಸಿ.ಬಿ. ಕುಲಕರ್ಣಿ ಅಧ್ಯಕ್ಷತೆ ವಹಿಸಿದರು.
ಅಂದು ಸಂಜೆ 5ಕ್ಕೆ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿಗಳು ನಡೆಯಲಿದೆ. ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕ ಗಣೇಶ ಹುಕ್ಕೇರಿ, ಪುರಸಭೆ ಅಧ್ಯಕ್ಷೆ ವೀಣಾ ಕವಟಗಿಮಠ, ಬೆಳಗಾವಿ ಜಿಲ್ಲಾ ಅಮೆಚೂರ ಕಬಡ್ಡಿ ಅಸೋಶಿಯೇಶನ್ ಅಧ್ಯಕ್ಷ ರಾಹುಲ ಜಾರಕಿಹೊಳಿ, ಸಿಟಿಇ ಸಂಸ್ಥೆ ಅಧ್ಯಕ್ಷ ಚಂದ್ರಶೇಖರ ಕುಲಕರ್ಣಿ, ಸಂಸ್ಥೆಯ ಉಪಾಧ್ಯಕ್ಷ ವಿಜಯ ಮಾಂಜೇಕರ, ಸಂಸ್ಥೆ ಕಾರ್ಯದರ್ಶಿ ಅರುಣ ಕುಲಕರ್ಣಿ, ಸತೀಶ ಕುಲಕರ್ಣಿ, ವಿನಾಯಕ ಶೇಡಬಾಳ, ಯಶವಂತ ಮಿರ್ಜಿ, ಸಂಜಯ ಅಡಕೆ, ಓಂಕಾರ ಕುಲಕರ್ಣಿ, ವಿಶ್ವಕಿರಣ ಕುಲಕರ್ಣಿ, ಆಡಳಿತಾಧಿಕಾರಿ ಶ್ರೀನಿವಾಸ ಜಹಗೀರದಾರ, ಜಂಟಿ ಕಾರ್ಯದರ್ಶಿ ಡಾ.ಮಿಥುನ ದೇಶಪಾಂಡೆ, ಭಾಗವಹಿಸಲಿದ್ದಾರೆ. ಪಂದ್ಯಾವಳಿಯಲ್ಲಿ 28 ಕಿಂತ ಹೆಚ್ಚು ತಂಡಗಳು ಭಾಗವಹಿಸಲಿವೆ.