ಪಟ್ಟಣದ ಸಂಸದರ ಕಚೇರಿಗೆ ಭೇಟಿ ನೀಡಿದ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಪದಾಧಿಕಾರಿಗಳು ಅಖಂಡ ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಮನವಿ ಸಲ್ಲಿಸಿದರು.
ಕಳೆದ 3 ದಶಕಗಳಿಂದ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುವಂತೆ ಈ ಭಾಗದ ಜನರ ಒತ್ತಾಯವಿದ್ದರೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸದೇ ಜಿಲ್ಲಾ ಘೋಷಣೆ ನನೆಗುದಿಗೆ ಬಿದ್ದಿದೆ. ಚಿಕ್ಕೋಡಿ ಜಿಲ್ಲಾ ಹೋರಾಟಕ್ಕಾಗಿ ದಿವಂಗತ ಬಿ ಆರ್ ಸಂಗಪ್ಪಗೋಳ, ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ, ದತ್ತು ಹಕ್ಯಾಗೋಳ ಮುಂತಾದವರು ತಮ್ಮ ಪ್ರಾಣತ್ಯಾಗ ಮಾಡಿದ್ದಾರೆ”ಎಂದು ವಿನಂತಿಸಿದರು.
ಕೇಂದ್ರ ಸರ್ಕಾರ ಡಿ.31ರೊಳಗೆ ಅವಶ್ಯಕತೆ ಇದ್ದಲ್ಲಿ ಹೊಸ ಜಿಲ್ಲೆ ಹಾಗೂ ತಾಲ್ಲೂಕುಗಳ ಘೋಷಣೆ ಮಾಡುವಂತೆ ನೀಡಿರುವ ನಿರ್ದೇಶನ ನೀಡಿದ್ದನ್ನು ಪರಿಗಣಿಸಿ ರಾಜ್ಯ ಸರ್ಕಾರ ಕೂಡಲೇ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಎಸ್ ವೈ ಹಂಜಿ, ಕಾರ್ಯಾಧ್ಯಕ್ಷ ರುದ್ರಪ್ಪ ಸಂಗಪ್ಪಗೋಳ, ಸುರೇಶ ಬ್ಯಾಕುಡೆ, ಸುರೇಶ ತಳವಾರ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಪ್ರದಾಣ ಕಾರ್ಯದರ್ಶಿ ಮಹಾವೀರ ಮೋಹಿತೆ ಇತರರು ಇದ್ದರು.