ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಅವಿರೋಧವಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಆಯ್ಕೆಯಾದ ಹಿನ್ನೆಲೆ ಅಭಿಮಾನಿಗಳ ಸಂತಸ ಮುಗಿಲು ಮುಟ್ಟಿತ್ತು.
ಬೆಳಗಾವಿಯ ಬಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಅವರ ನಿವಾಸದಲ್ಲಿ ಇಂದು ಅಭಿಮಾನಿಗಳು ಸಿಹಿ ಹಂಚಿ, ಗುಲಾಲು ಎರಚಿ ಘೋಷಣೆಗಳನ್ನು ಕೂಗುತ್ತ ಸಂಭ್ರಮಾಚರಣೆ ಮಾಡಿದರು. ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ತಾಯಿ ಗಿರಿಜಾ ಹಟ್ಟಿಹೊಳಿ ಹಾಗೂ ಕುಟುಂಬಸ್ಥರು ಆರತಿ ಬೆಳಗಿ ಸಿಹಿ ತಿನ್ನಿಸಿ ಶುಭಾಷಯಗಳನ್ನು ಕೋರಿದರು.