Bailahongala

ಸರ್ಕಾರ ನಿಗದಿತ ದರಕ್ಕಿಲ್ಲ ಸಂತಸ…ಬೈಲಹೊಂಗಲ್ ಬಂದ್…

Share

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಕಬ್ಬಿನ ಬೆಲೆಗಾಗಿ ನಡೆಯುತ್ತಿದ್ದ ರೈತರ ಹೋರಾಟದ ಹಿನ್ನೆಲೆಯಲ್ಲಿ, ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರು ಕೊನೆಗೂ ಪ್ರತಿ ಟನ್‌ಗೆ ₹3300 ನೀಡಲು ನಿರ್ಧರಿಸಿದ್ದಾರೆ. ಆದರೇ, ಬೈಲಹೊಂಗಲ ತಾಲೂಕಿನಲ್ಲಿ, ರೈತರು ಸರ್ಕಾರದ ಈ ಘೋಷಣೆಯನ್ನು ತಿರಸ್ಕರಿಸಿದ್ದು, ಪಟ್ಟಣವನ್ನು ಸಂಪೂರ್ಣವಾಗಿ ಬಂದ್ ಮಾಡಿ ಪ್ರತಿಭಟನೆ ಮುಂದುವರೆಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಕಬ್ಬಿನ ಬೆಲೆಗಾಗಿ ನಡೆಯುತ್ತಿದ್ದ ರೈತರ ಹೋರಾಟದ ಹಿನ್ನೆಲೆಯಲ್ಲಿ, ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರು ಕೊನೆಗೂ ಪ್ರತಿ ಟನ್‌ಗೆ ₹3300 ನೀಡಲು ನಿರ್ಧರಿಸಿದ್ದಾರೆ. ಈ ನಿರ್ಧಾರಕ್ಕೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಂತೃಪ್ತಿ ವ್ಯಕ್ತವಾಗಿದ್ದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ, ರೈತರು ಸರ್ಕಾರದ ಈ ಘೋಷಣೆಯನ್ನು ತಿರಸ್ಕರಿಸಿದ್ದು, ಪಟ್ಟಣವನ್ನು ಸಂಪೂರ್ಣವಾಗಿ ಬಂದ್ ಮಾಡಿ ಪ್ರತಿಭಟನೆ ಮುಂದುವರೆಸಿದ್ದಾರೆ. ಬೈಲಹೊಂಗಲ ಕಬ್ಬು ಬೆಳೆಗಾರರ ಪ್ರಕಾರ, ಅವರ ಪ್ರದೇಶದಲ್ಲಿ ಕಬ್ಬಿನ ರಿಕವರಿ ಪ್ರಮಾಣ ಹೆಚ್ಚಿರುವ ಕಾರಣ, ಪ್ರತಿ ಟನ್‌ಗೆ ₹3500 ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಬೈಟ್
ಸರ್ಕಾರ ನಿಗದಿಪಡಿಸಿದ ಬೆಲೆಗೆ ಒಪ್ಪದೆ, ರೈತರು ಇಂದು ಬೈಲಹೊಂಗಲ ಪಟ್ಟಣ ಬಂದ್ ಮಾಡುವ ಮೂಲಕ ಹೋರಾಟದ ತೀವ್ರತೆಯನ್ನು ಹೆಚ್ಚಿಸಿದ್ದಾರೆ. ಈ ಬಂದ್‌ಗೆ ವಿವಿಧ ಸಂಘಟನೆಗಳು ಸಹ ಬೆಂಬಲ ನೀಡಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಆಟೋ ಸೇವೆ, ಬಸ್ ಸಂಚಾರ, ಅಂಗಡಿ ಮುಗ್ಗಟ್ಟುಗಳು ಮತ್ತು ಬೀದಿ ವ್ಯಾಪಾರಿಗಳು ಬಂದ್ ಕರೆಗೆ ಸ್ಪಂದಿಸಿವೆ. ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟವನ್ನು ಮುಂದುವರೆಸುವುದಾಗಿ ಘೋಷಿಸಿದ್ದಾರೆ. ಈ ಬಿಕ್ಕಟ್ಟು ಇನ್ನೆಷ್ಟು ದಿನ ಮುಂದುವರಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

Tags:

error: Content is protected !!