ಸೈದಾಪುರದ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಕಲ್ಲು ತೂರಾಟ ಮತ್ತು ಟ್ರ್ಯಾಕ್ಟರ್’ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ್ ಅವರು ಜಂಟಿ ಹೇಳಿಕೆ ನೀಡಿದ್ದಾರೆ. ಈ ಘಟನೆಯು “ರೈತರ ಹೆಸರಿನಲ್ಲಿ ಕಿಡಿಗೇಡಿಗಳು ಮಾಡಿರುವ ಕೃತ್ಯ” ಎಂದು ಸಚಿವರು ಆರೋಪಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಸಮೀಪವಿರುವ ಸೈದಾಪುರದ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ದುರ್ಘಟನೆ ಕುರಿತು ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ್ ಅವರು ಜಂಟಿ ಹೇಳಿಕೆ ನೀಡಿದ್ದಾರೆ. ಈ ಘಟನೆಯು “ರೈತರ ಹೆಸರಿನಲ್ಲಿ ಕಿಡಿಗೇಡಿಗಳು ಮಾಡಿರುವ ಕೃತ್ಯ” ಎಂದು ಸಚಿವರು ಆರೋಪಿಸಿದ್ದಾರೆ. ಹಾನಿಗೊಳಗಾದ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ 7 ಕೋಟಿ 30 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಬೇಕಿದ್ದು, ಕಬ್ಬು ನುರಿಯುವ ಪ್ರಕ್ರಿಯೆ ತುರ್ತಾಗಿ ಶುರುವಾಗಬೇಕಿದೆ. ಹೀಗಾಗಿ, ರೈತರು ಸ್ವಯಂ ಪ್ರೇರಿತರಾಗಿ ಕಾರ್ಖಾನೆಗಳಿಗೆ ಕಬ್ಬನ್ನು ಕಳುಹಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ. ಸೈದಾಪುರ ಕಾರ್ಖಾನೆಗೆ ಸ್ವಲ್ಪ ಸಮಸ್ಯೆ ಆಗಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಸಚಿವರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು, ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ಕಾರ್ಖಾನೆ ಮಾಲೀಕರು ಹಿಂಜರಿಯದೆ ಕಾರ್ಖಾನೆಗಳನ್ನು ಆರಂಭಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ. ರೈತ ಹೋರಾಟಗಾರರು ₹3500 ನೀಡಬೇಕೆಂದು ಆಗ್ರಹಿಸಿದ್ದರು. ಕಾರ್ಖಾನೆ ಮಾಲೀಕರು ಸದ್ಯಕ್ಕೆ ₹3250 ನೀಡಲು ಒಪ್ಪಿದ್ದಾರೆ. ಈ ಬಗ್ಗೆ ತಾವು ಈಗಾಗಲೇ ನಾಲ್ಕು ಸಭೆಗಳನ್ನು ನಡೆಸಿದ್ದಾಗಿ ತಿಳಿಸಿದ ಸಚಿವ ಶಿವಾನಂದ್ ಪಾಟೀಲ್, ರೈತ ಹೋರಾಟಗಾರರು ಮೊದಲು ₹3500, ನಂತರ ರಿಕವರಿ ಬೇಡ ಏಕರೂಪ ದರ ನಿಗದಿ, ಹಾಗೂ ಆಮೇಲೆ ₹3250 ಒಂದೇ ಬಾರಿಗೆ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಈ ಮಾತುಕತೆ ನಡೆಯುತ್ತಿರುವಾಗಲೇ ದುರ್ಘಟನೆ ನಡೆದಿರುವುದು ವಿಷಾದನೀಯ ಎಂದರು.

