ವಿಜಯಪುರ ನಗರದಲ್ಲಿ ನವೆಂಬರ್ 15 ರಂದು ಎಂ.ಎಂ. ಕಲಬುರ್ಗಿ ಅವರ ವಚನ ಸಾಹಿತ್ಯ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಲೋಕಾರ್ಪಣೆ ಗೊಳಿಸಲಿದ್ದಾರೆ ಎಂದು ಇತಿಹಾಸ ತಜ್ಞ ಕೃಷ್ಣ ಕೊಲ್ಲಾರ ಕುಲಕರ್ಣಿ ಅವರು ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು. ಈ ಪುಸ್ತಕ ಲೋಕಾರ್ಪಣೆಗೊಳ್ಳುವುದರಿಂದ ಈ ಭಾಗದ ಜನರಿಗೆ ವಚನ ಸಾಹಿತ್ಯವನ್ನು ತಲುಪಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಇನ್ನೂ ಹೆಚ್ಚಿನ ಸಾಹಿತಿಗಳು ಮತ್ತು ಕವಿಗಳು ಭಾಗವಹಿಸುವಂತೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎಮ್.ಎಸ್.ಮದಬಾವಿ, ಡಾ.ಮಹಾಂತೇಶ ಬಿರಾದಾರ ಮತ್ತಿತರರು ಉಪಸ್ಥಿತರಿದ್ದರು.

