ಧಾರವಾಡ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ಪೊಲೀಸ್ ಸಿಬ್ಬಂದಿ ಅಸುನೀಗಿದ್ದು, ಧಾರವಾಡ ಜಿಲ್ಲಾ ಪೊಲೀಸರು ಕಂಬನಿ ಮಿಡಿದಿದ್ದಾರೆ.
V-ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಹುಟಗಿ ಎನ್ನುವವರು ಹೃದಯಾಘಾತದಿಂದ ಸಾವನ್ನಪ್ಪಿದರೆ, ಧಾರವಾಡ ಸಂಚಾರ ಠಾಣೆ ಹೆಡ್ ಕಾನ್ಸ್‌ಟೇಬಲ್ ಎನ್.ಬಿ.ಭಜಂತ್ರಿ ಅವರು ಬಹು ಅಂಗಾಂಗ ವೈಫಲ್ಯದಿಂದ ಅಸುನೀಗಿದ್ದಾರೆ. ಒಂದೇ ದಿನ ಈ ಇಬ್ಬರೂ ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿರುವುದಕ್ಕೆ ಧಾರವಾಡ ಜಿಲ್ಲಾ ಪೊಲೀಸರು ಹಾಗೂ ಧಾರವಾಡ ನಗರ ಪೊಲೀಸರು ಕಂಬನಿ ಮಿಡಿದಿದ್ದಾರೆ.

