BELAGAVI

ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 29 ಕೃಷ್ಣಮೃಗಗಳ ಸಾವು

Share

ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 29 ಕೃಷ್ಣಮೃಗಗಳ ಸರಣಿ ಸಾವಿನ ಪ್ರಕರಣಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆಯ ದುರ್ಲಕ್ಷ್ಯವೇ ಕಾರಣ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಬೆಳಗಾವಿಯ ಸಂಸದ ಜಗದೀಶ್ ಶೆಟ್ಟರ್ ಅವರು ಒತ್ತಾಯಿಸಿದರು.

ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಜನರು ಪಿಎಂ ಮೋದಿ ಅವರ ನೇತೃತ್ವವನ್ನು ನೆಚ್ಚಿ ಬೆಂಬಲ ಸೂಚಿಸಿದ್ದರಿಂದ ಬಿಜೆಪಿ ಬಿಹಾರ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದೆ. ಬಿಜೆಪಿ ದಿನದಿಂದ ದಿನಕ್ಕೆ ಜನರ ವಿಶ್ವಾಸವನ್ನು ಗಳಿಸಿದರೇ, ಕಾಂಗ್ರೆಸ್ ದಿನದಿಂದ ದಿನಕ್ಕೆ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿದೆ. ಆದ್ದರಿಂದಲೇ ಪದೇ ಪದೇ ಬಿಜೆಪಿ ಮೇಲೆ ಟೀಕೆಗಳನ್ನು ಮಾಡುತ್ತಿದೆ. ಒಂದು ವೇಳೆ ನಾವು ಮತದಾರರಿಗೆ 10 ಸಾವಿರ ರೂಪಾಯಿ ನೀಡಿದ ಆರೋಪ ನಿಜವಾಗಿದ್ದರೇ, ರಾಹುಲ್ ಗಾಂಧಿ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಲಿ ಎಂದು ಸವಾಲು ಹಾಕಿದರು. ಬೈಟ್

ಇನ್ನು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 29 ಕೃಷ್ಣಮೃಗಗಳ ಸರಣಿ ಸಾವಿನ ಪ್ರಕರಣಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆಯ ದುರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತಕ್ಷಣ ರಾಜೀನಾಮೆ ನೀಡಬೇಕು. ಅಲ್ಲದೇ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇನ್ನು ಸ್ವಾತಂತ್ರ್ಯಾ ನಂತರ ದೇಶದ ಏಕತೆಯನ್ನು ಕಾಪಾಡಿದ ಸರದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯ ನಿಮಿತ್ಯ ಬೆಳಗಾವಿಯಲ್ಲಿ ನವೆಂಬರ್ 19 ರಂದು ಬೆಳಗಿನ ಜಾವ 6-30ಕ್ಕೆ ಏಕತಾ ಯಾತ್ರೆಯನ್ನು ಆಯೋಜಿಸಲಾಗುತ್ತಿದೆ ಎಂದರು.

Tags:

error: Content is protected !!