Vijaypura

ಸಿಎಂ ಸಿದ್ದರಾಮಯ್ಯನವ್ರಿಂದ ವಿಜಯಪುರ ರೈತರಿಗೆ ಅನ್ಯಾಯ: ರೈತ ಮುಖಂಡರ ಆಕ್ರೋಶ

Share

ವಿಜಯಪುರ… ವಿಜಯಪುರ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ವಿಜಯಪುರ ‌ಗರದ ಡಾ. ಬಿ.ಆರ್. ಅಂಬೇಡ್ಕ‌ರ್ ವೃತ್ತದಲ್ಲಿ ಅಖಂಡ ಕರ್ನಾಟಕ ರೈತ ಸಂಘಟನೆ ಪ್ರತಿಭಟನೆ ನಡೆಸಿತು. ಕಲಬುರ್ಗಿ ಜಿಲ್ಲೆಗೆ 200 ಕೋಟಿ ರೂ. ಪರಿಹಾರ ನೀಡಲಾಗಿದ್ದು, ವಿಜಯಪುರ ಜಿಲ್ಲೆಗೆ ಯಾವುದೇ ಪರಿಹಾರ ನೀಡಿಲ್ಲ. ಸರ್ಕಾರ ಕೂಡಲೇ ಈ ತಾರತಮ್ಯ ಸರಿಪಡಿಸಿ ವಿಜಯಪುರ ಜಿಲ್ಲೆಯ ರೈತರಿಗೆ ಪರಿಹಾರ ನೀಡಬೇಕು

 

ಎಂದು ಸಂಘಟನೆ ಆಗ್ರಹಿಸಿದರು. ‌ಇನ್ನೂ ಈ ವೇಳೆ ಮಾತನಾಡಿದ ರೈತ ಮುಖಂಡರು ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಅತಿವೃಷ್ಟಿ ಪರಿಹಾರ ಹಣ ಬಿಡುಗಡೆ ಮಾಡಿದೆ. ಆದರೆ ಕಿತ್ತೂರು ಕರ್ನಾಟಕದ ಜಿಲ್ಲೆಗಳಿಗೆ ಪರಿಹಾರ ನೀಡದೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ವಿಜಯಪುರದಲ್ಲಿ ರೈತ ಸಂಘಟನೆಯ ಮುಖಂಡರು ಆರೋಪಿಸಿದರು. ಕಿತ್ತೂರು ಕರ್ನಾಟಕದ ಜಿಲ್ಲೆಗಳಿಗೆ ಅತಿವೃಷ್ಟಿಯಿಂದ ಅಪಾರ ನಷ್ಟವಾಗಿದ್ದರೂ, ಮುಖ್ಯಮಂತ್ರಿಗಳು ಕಾಟಾಚಾರಕ್ಕೆ ಸಮೀಕ್ಷೆ ನಡೆಸಿ ತಾರತಮ್ಯ ಮಾಡಿದ್ದಾರೆ ಎಂದು ಅವರು ಮಾಧ್ಯಮದ ಮುಂದೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು

Tags:

error: Content is protected !!